deshadoothanews

9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಅಗತ್ಯ ಸಿದ್ಧತೆಗೆ ಸಿಇಓ ಸೂಚನೆ —-

ಡಿ ಡಿ ನ್ಯೂಸ್. ಕೊಪ್ಪಳ

0

ಡಿ ಡಿ ನ್ಯೂಸ್.

ಕೊಪ್ಪಳ : ಜಿಲ್ಲಾ ಕೇಂದ್ರದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಕುರಿತಂತೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಜಿಪಂ ಸ್ಥಾಯಿ ಸಮಿತಿ ಕಚೇರಿಯ ಸಭಾಂಗಣದಲ್ಲಿ ಜೂನ್ 15ರಂದು ಪೂರ್ವಭಾವಿ ಸಿದ್ಧತಾ ಸಭೆಯ ನಡೆಯಿತು.

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಬೆಳಿಗ್ಗೆ 6.30 ರಿಂದ 7.30ರವರೆಗೆ ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲು ಹಾಗೂ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆ ಜೊತೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯ ಪಾಲ್ಗೊಳ್ಳಬೇಕು. ಯೋಗ ದಿನದಂದು ಶಾಲಾ, ಕಾಲೇಜು, ವಸತಿ ಶಾಲೆಗಳ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಯೋಗ ದಿನಾಚರಣೆಯ ಯಶಸ್ಸಿಗೆ ಎಲ್ಲರ ಸಹಭಾಗೀತ್ವ ಬಹುಮುಖ್ಯವಾಗಿದ್ದು, ಯೋಗ ದಿನಾಚರಣೆಯ ಬಗ್ಗೆ ಹೆಚ್ಚಿನ ರೀತಿಯಲ್ಲಿ ಪ್ರಚಾರ ನಡೆಸಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವ ಹಾಗೆ ನೋಡಿಕೊಳ್ಳಬೇಕು. ಕಾರ್ಯಕ್ರಮ ಸ್ಥಳದಲ್ಲಿ ಅಗತ್ಯ ಕುಡಿಯುವ ನೀರು ಮತ್ತು ಯೋಗಾಸನಕ್ಕೆ ಸಂಬಂಧಿಸಿದಂತೆ ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಕಾರ್ಯಕ್ರಮ ದಿನದಂದು ಅಗತ್ಯ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಕುರಿತಂತೆ ಪೊಲೀಸ್ ಇಲಾಖೆಗೆ ಪತ್ರ ಬರೆದು ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಧ್ಯಮವರು, ವಕೀಲರು, ಪೊಲೀಸರು ಹಾಗೂ ಮಾಜಿ ಸೈನಿಕರಿಗೆ ಮಾಹಿತಿ ನೀಡಬೇಕು ಎಂದು ಆಯುಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಯಮನಪ್ಪ ಶಿರವಾರ ಅವರು ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಈ ಬಾರಿ “ವಾಸುಧೈವ ಕುಟುಂಬಕಂ” ಹಾಗೂ ಟ್ಯಾಗ್‌ಲೈನ್ “ಹರ್ ಆಂಗನ್ ಯೋಗ” ಎಂಬ ಘೋಷವಾಕ್ಯದೊಂದಿಗೆ ಆಚರಣೆ ಮಾಡಲಾಗುತ್ತಿದೆ. ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಯೋಗ ದಿನಾಚರಣೆ ನಡೆಸಲು ಎಲ್ಲ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಕೊಪ್ಪಳ ಆಯುಷ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶರಣಪ್ಪ ಹೈದ್ರಿ, ಗಂಗಾವತಿ ಆಯುಷ್ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಗುರುರಾಜ್ ಉಮಚಗಿ, ವೈದ್ಯಾಧಿಕಾರಿಗಳಾದ ಡಾ.ಮಾರುತಿ ದೊಡ್ಡಮನಿ ಹಾಗೂ ಡಾ.ಪ್ರಲ್ಹಾದ ಐಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

Leave A Reply

Your email address will not be published.