deshadoothanews

ಜಿಲ್ಲೆಯ ವಿವಿಧೆಡೆ ಕುಡಿಯುವ ನೀರು ಒದಗಿಸಲು ಕ್ರಮ: ಜಿಪಂ ಸಿಇಓ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ :
 ಕೊಪ್ಪಳ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನ ಜನ ವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ, ಟ್ಯಾಂಕರ್ ಹಾಗೂ ಬೋರವೆಲ್‌ಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮಕೈಗೊಳ್ಳಲಾಗಿದೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿನ ಜನ ವಸತಿ ಪ್ರದೇಶಗಳಲ್ಲಿ 651 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಅದರಲ್ಲಿ 516 ಘಟಕಗಳು ಚಾಲನೆಯಲ್ಲಿವೆ ಹಾಗೂ 135 ಘಟಕಗಳು ದರುಸ್ತಿಯಲ್ಲಿವೆ ಮತ್ತು 451 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಈಗಾಗಲೇ ಸಂಬಂಧಿಸಿದ ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದೆ.
ಗಂಗಾವತಿ, ಕನಕಗಿರಿ, ಕೊಪ್ಪಳ, ಕುಷ್ಟಗಿ ಹಾಗೂ ಯಲಬುರ್ಗಾ ತಾಲೂಕಿನ 07 ಗ್ರಾಮಗಳಲ್ಲಿ 29 ಟ್ಯಾಂಕರಗಳ ಮೂಲಕ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ ಹಾಗೂ ಇತರೆ 15 ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು 19 ಖಾಸಗಿ ಬೋರವೆಲ್‌ಗಳನ್ನು ಬಾಡಿಗೆ ಪಡೆದು ಕುಡಿಯುವ ನೀರನ್ನು ಪೂರೈಸಿರುವುದು ಸೇರಿದಂತೆ ಜಿಲ್ಲೆಯ 07 ತಾಲೂಕಿನಲ್ಲಿ ನೀರಿನ ಸಮಸ್ಯೆ ಕಂಡು ಬಂದ ಕಡೆಗಳಲ್ಲಿ ಕುಡಿಯುವ ನೀರನ್ನು ಒದಗಿಸುವಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರು ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಅವರು ತಿಳಿಸಿದ್ದಾರೆ.
Leave A Reply

Your email address will not be published.