deshadoothanews

*ಆದರ್ಶ ವಿದ್ಯಾಲಯಗಳ ದಾಖಲಾತಿಗೆ ಅರ್ಜಿ ಆಹ್ವಾನ*

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ :
 2023-24ನೇ ಸಾಲಿನ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಆದರ್ಶ ವಿದ್ಯಾಲಯಗಳಲ್ಲಿರುವ 7ನೇ ತರಗತಿ 8ನೇ ತರಗತಿ ಮತ್ತು 9ನೇ ತರಗತಿಯಲ್ಲಿ ಖಾಲಿ ಸ್ಥಾನಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ದಾಖಲಾತಿಗಾಗಿ ಅರ್ಜಿಗಳನ್ನು ಕರೆಯಲಾಗಿದೆ.
2023ರ ಜೂನ್ 27 ರಿಂದ ಜುಲೈ 07ರವರೆಗೆ ಸಂಬಂಧಿಸಿದ ತಾಲ್ಲೂಕಿನ ಆದರ್ಶ ವಿದ್ಯಾಲಯಗಳಲ್ಲಿ ಅರ್ಜಿ ಪಡೆದು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 07ರ ಸಂಜೆ 5 ಗಂಟೆಯವರೆಗೆ ಇರುತ್ತದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ತಾಲ್ಲೂಕುಗಳಲ್ಲಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಜುಲೈ 15ರಂದು ಬೆಳಿಗ್ಗೆ 11 ಗಂಟೆಯಿಂದ 01.30ರವರೆಗೆ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮುನಿರಾಬಾದ್ ಜಿಲ್ಲಾ ಕೊಪ್ಪಳದ ಉಪ ನಿರ್ದೇಶಕರು (ಅಭಿವೃದ್ಧಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave A Reply

Your email address will not be published.