ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಡಿ ಡಿ ನ್ಯೂಸ್. ಕೊಪ್ಪಳ
ಡಿ ಡಿ ನ್ಯೂಸ್. ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ವಸತಿ ನಿಲಯಗಳಲ್ಲಿ ಪಿಯುಸಿ ಮತ್ತು ಪಿಯುಸಿ ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.
ಪ್ರವೇಶ ಬಯಸುವ ಪ್ರವರ್ಗ-1, ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷಕ್ಕೆ ಮೀರಿರಬಾರದು. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ರೂ. 1 ಲಕ್ಷದೊಳಗಿರಬೇಕು.
ವಿದ್ಯಾರ್ಥಿಗಳು ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಮತ್ತು ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇಲಾಖೆ ವೆಬ್ಸೈಟ್ www.bcwd.karnataka.gov.in ನ್ನು ನೋಡಬಹುದು ಅಥವಾ ಜಿಲ್ಲಾ, ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8050770005ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BCWD.KARNATAKA.GOV.IN
ಮುಖಪುಟ – ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ನಿಮಗೆ ಒದಗಿಸಬೇಕಾದ / ಒದಗಿಸಲಾದ ಕರ್ನಾಟಕ ಸರ್ಕಾರದ ಸೇವೆ / ಯೋಜನೆಯ ಬಗ್ಗೆ ಕುಂದುಕೊರತೆ ಏನಾದರೂ ಇದ್ದಲ್ಲಿ ಇಲ್ಲಿ ನೋಂದಾಯಿಸಿ / 1902 ಗೆ…