ಡಿ ಡಿ ನ್ಯೂಸ್.
ಕೊಪ್ಪಳ (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿ ಉಳಿದ ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 2ಎ, 2ಬಿ, 3ಎ, 3ಬಿ ಗೆ ಸೇರಿದ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ಆದಾಯ 1 ಲಕ್ಷಕ್ಕೆ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರ ವರ್ಗ-1 ವಿದ್ಯಾರ್ಥಿಗಳ ಪೋಷಕರ ಆದಾಯವು 2.50 ಲಕ್ಷದೊಳಗಿರಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ತಾಲೂಕಿನ ಹತ್ತಿರದ ವಸತಿ ಶಾಲೆಗಳಲ್ಲಿ ಖುದ್ದಾಗಿ ಹೋಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಜೂನ್ 19 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತಾಲೂಕಾ ಪ್ರವೇಶ ಪರೀಕ್ಷಾ ಮುಖಸ್ಥರನ್ನು ಅಥವಾ ಯಲಬುರ್ಗಾ ತಾಲೂಕಿನ ಬಳೂಟಗಿಯ ಕಿತ್ತೂರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಚಾರ್ಯರರ ಮೊ.ಸಂ: 7829956092, ಗಂಗಾವತಿ ತಾಲೂಕಿನ ಶ್ರೀರಾಮನಗರದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಚಾರ್ಯರರ ಮೊ.ಸಂ: 9980158255, ಕುಷ್ಟಗಿ ತಾಲೂಕಿನ ತಾವರಗೇರಾದ ಕಿತ್ತೂರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಚಾರ್ಯರರ ಮೊ.ಸಂ: 7899783582 ಹಾಗೂ ಕೊಪ್ಪಳ ತಾಲೂಕಿನ ಹಿರೇಕಾಸನಕಂಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯರರ ಮೊ.ಸಂ: 9482326285 ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.