ಡಿ ಡಿ ನ್ಯೂಸ್. ಕೊಪ್ಪಳ:
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದಿಂದ 2023-24ನೇ ಸಾಲಿನ ವಿದ್ಯಾರ್ಥಿಗಳ ರಿಯಾಯತಿ ಬಸ್‌ಪಾಸ್ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬಸ್‌ಪಾಸ್ ಪಡೆಯುವ ವಿದ್ಯಾರ್ಥಿಗಳು ಸೇವಾಸಿಂಧು ಪೊರ್ಟಲ್ ವೆಬ್‌ಸೈಟ್ http://sevasindhu.karnataka.gov.in ಅಥವಾ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ 30ರೂ ಸೇವಾ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಬಳಿಕ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಅಥವಾ ಯುಪಿಐ ಮೂಲಕ ಪಾವತಿಸಿ ಪಾಸ್ ಪಡೆಯಬಹುದಾಗಿದೆ. ಈ ಬಗ್ಗೆ ಕೊಪ್ಪಳದಲ್ಲಿ 02 ಹಾಗೂ ಕುಷ್ಟಗಿ, ಯಲಬುರ್ಗಾ, ಗಂಗಾವತಿ ಹಾಗೂ ಕುಕನೂರ ತಾಲೂಕಿನಲ್ಲಿ ತಲಾ 01 ಪಾಸ್ ವಿತರಣಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಘಟಕ ವ್ಯವಸ್ಥಾಪಕರು, ಕೊಪ್ಪಳ ಮೊ.ಸಂ: 7760992413, ಕುಷ್ಟಗಿ ಮೊ.ಸಂ: 7760992414, ಯಲಬುರ್ಗಾ ಮೊ.ಸಂ: 7760992415, ಗಂಗಾವತಿ ಮೊ.ಸಂ: 7760992416, ಕುಕನೂರ ಮೊ.ಸಂ: 8197831224, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕ.ಕ.ರ.ಸಾ ನಿಗಮದ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.