deshadoothanews

ಸಂವಿಧಾನದಿಂದ ಸರ್ವರಿಗೂ ಸಮಬಾಳು, ಸಮಪಾಲು: ನ್ಯಾಯಾಧೀಶ ಸಿ.ಚಂದ್ರಶೇಖರ

Everyone is equal, equal by the Constitution: Judge C. Chandrasekhara

0

ಡಿ. ಡಿ. ನ್ಯೂಸ್ . ಯಲಬುರ್ಗಾ:

 

ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನದಿಂದಾಗಿ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ದೊರೆತಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಸಿ.ಚಂದ್ರಶೇಖರ ಹೇಳಿದರು.

ಪಟ್ಟಣದ ಸ್ನಾತಕೋತ್ತರ ಕೇಂದ್ರದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕೊಪ್ಪಳ, ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯಾವಾಧಿಗಳ ಸಂಘ ಹಾಗೂ ಸ್ನಾತಕೋತ್ತರ ಕೇಂದ್ರ, ವಿ.ವಿ ಕೊಪ್ಪಳ ಇವರುಗಳು ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಂಗಳವಾರ ಮಾತನಾಡಿದರು. ಬಾಬಾ ಸಾಹೇಬ ಅಂಬೇಡ್ಕರ್ ಒಳಗೊಂಡಂತೆ ನಮ್ಮ ದೇಶದ ಸ್ವಾತಂತ್ರ್ಯ ಯೋಧರು 1949 ಜನವರಿ 26 ರಂದು ವಿಶ್ವದಲ್ಲೇ ಅತ್ಯಂತ ದೊಡ್ಡದಾದ ಪ್ರಜಾಪ್ರಭುತ್ವ ಅಂಶಗಳನ್ನು ಒಳಗೊಂಡಂತ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ. ನಮ್ಮ ಸಂವಿಧಾನದ ಪೀಠಿಕೆಯಂತೆ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ನಮ್ಮ ಸಂವಿಧಾನದ ಉದ್ದೇಶವಾಗಿದ್ದು, ಪ್ರತಿಯೊಬ್ಬರೂ ಈ ದೇಶದ ಸಂವಿಧಾನವನ್ನು ಓದುವುದುರ ಮುಖಾಂತರ ತಿಳಿದುಕೊಂಡು ಹೋಗಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ ಎಂದರು.

ವಿ.ವಿ.ಕುಲಪತಿ ಬಿ.ಕೆ. ರವಿ ಅಧ್ಯಕ್ಷತೆ ವಹಿಸಿದ್ದರು. ಸ್ನಾತಕೋತ್ತರ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಬಸವರಾಜ ಈಳಿಗನೂರ ಉಪನ್ಯಾಸ ನೀಡಿದರು. ವಿ.ವಿ ಕುಲಸಚಿವ ಕೆ.ವಿ ಪ್ರಸಾದ್, ವಕೀಲರ ಸಂಘದ ಅಧ್ಯಕ್ಷ ಪ್ರಕಾಶ ಬೇಲೇರಿ, ವಕೀಲ ಎಸ್.ಎನ್.ಶ್ಯಾಗೋಟಿ ಮಾತನಾಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ, ಸ್ನಾತಕೋತ್ತರ ಕೇಂದ್ರ ನಿರ್ದೇಶಕ ಡಾ. ಚಲವಾದಿ ಚನ್ನಬಸಪ್ಪ, ಸಹಾಯಕ ಸರ್ಕಾರಿ ಅಭಿಯೋಜಕ ರವಿ ಹುಣಸಿಮರದ, ಅಪರ‌ ಸರ್ಕಾರಿ ವಕೀಲ ಮಲ್ಲನಗೌಡ ಎಸ್. ಪಾಟೀಲ್, ವಕೀಲರಾದ ಈರಣ್ಣ ಕೋಳೂರ, ಸೇರಿದಂತೆ ಇತರರು ಇದ್ದರು.

Leave A Reply

Your email address will not be published.