ಡಿ ಡಿ ನ್ಯೂಸ್. ಕೊಪ್ಪಳ
ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಿರುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವಾಧ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ, ಜಿಲ್ಲಾಧಿಕಾರಿಗಳಾದ ಎಂ.ಸುAದರೇಶಬಾಬು ಅವರು ಏಪ್ರೀಲ್ 29ರಂದು ಭೇಟಿ ನೀಡಿ ಪರಿಶೀಲಿಸಿದರು.
ಅದೇ ರೀತಿ ನವೋದಯ ಶಾಲೆಯ ಪ್ರವೇಶಕ್ಕಾಗಿ ನಡೆದ ಸ್ಫರ್ಧಾತ್ಮಕ ಪರೀಕ್ಷಾ ಕೇಂದ್ರವಾದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸಹ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 26 ನವೋದಯ ಪ್ರವೇಶ ಪರೀಕ್ಷಾ ಕೇಂದ್ರಗಳಿದ್ದು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಮಟ್ಟದ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಮತ್ತು ನವೋದಯ ಪ್ರಾಂಶುಪಾಲರು ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ.ಎ.ರಡ್ಡೇರ್ ಅವರು ಜಿಲ್ಲಾಧಿಕಾರಿಗಳಿಗೆ ಇದೆ ವೇಳೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕುಕನೂರ ನವೋದಯ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಜಯಾ ಹಾಗೂ ಇತರರು ಇದ್ದರು.
ಕನಕಗಿರಿ: ಚುನಾವಣಾ ವೀಕ್ಷಕರಿಂದ 2ನೇ ಸುತ್ತಿನ ರ‍್ಯಾಂಡಮೈಸೇಶನ್ ಪ್ರಕ್ರಿಯೆ
ಕೊಪ್ಪಳ (ಕರ್ನಾಟಕ ವಾರ್ತೆ): ಸಾರ್ವತ್ರಿಕ ಚುನಾವಣೆ 2023ರ ಹಿನ್ನಲೆಯಲ್ಲಿ ಕನಕಗಿರಿ ಚುನಾವಣಾಧಿಕಾರಿಗಳ ಕಚೇರಿಯಲ್ಲಿ 2ನೇ ಸುತ್ತಿನ ರ‍್ಯಾಂಡಮೈಸೇಶನ್ ಪ್ರಕ್ರಿಯೆಯು ಚುನಾವಣಾ ವೀಕ್ಷಕರಾದ ಸ್ವಪ್ನಿಲ್ ನಾಯ್ಕ ಹಾಗೂ ಕ್ಷೇತ್ರ ಚುನಾವಣಾಧಿಕಾರಿ ಸಮೀರ್ ಮುಲ್ಲಾ ಅವರ ನೇತೃತ್ವದಲ್ಲಿ ಅಭ್ಯರ್ಥಿಗಳ ಏಜಂಟುರುಗಳ ಸಮ್ಮುಖದಲ್ಲಿ ಏಪ್ರೀಲ್ 28ರಂದು ನಡೆಯಿತು.
ಈ ವೇಳೆ ವಿದ್ಯುನ್ಮಾನ ಮತಯಂತ್ರಗಳಾದ ಸಿಯು, ಬಿಯು, ವಿವಿ ಪ್ಯಾಟಗಳನ್ನು 61-ಕನಕಗಿರಿ ವಿಧಾನಸಭಾ ಕ್ಷೇತ್ರದ 264 ಮತಗಟ್ಟೆಗಳಿಗೆ ಹಂಚಿಕೆ ಮಾಡಲಾಯಿತು. ಚುನಾವಣಾ ವೀಕ್ಷಕರು ಸ್ಟ್ರಾಂಗ್ ರೂಂಗೆ ಭೇಟಿ ನೀಡಿ, ಭದ್ರತೆಯ ಕುರಿತು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿಗಳು, ಆರ್.ಓ ಕಚೇರಿ ಸಿಬ್ಬಂದಿ ಹಾಜರಿದ್ದರು.