ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದೇಶಿ ಸಾಲ ಯೋಜನೆ: ಅರ್ಜಿ ಆಹ್ವಾನ
ಡಿ ಡಿ ನ್ಯೂಸ್. ಕೊಪ್ಪಳ
ಡಿ ಡಿ ನ್ಯೂಸ್. ಕೊಪ್ಪಳ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಎನ್.ಎಂ.ಡಿ.ಎಫ್.ಸಿ ಮಾದರಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲಿಚ್ಛೀಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದೇಶಿ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಎನ್.ಎಂ.ಡಿ.ಎಫ್.ಸಿ ಮಾದರಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡ ಬಯಸುವ ಅಲ್ಲಸಂಖ್ಯಾತ ವಿದ್ಯಾರ್ಥಿಗಳು ಮತ್ತು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ ಭಾರತ ದೇಶದ ಪ್ರತಿಷ್ಟಿತ ಐಐಟಿ, ಐಐಎಂ, ಐ.ಎಸ್.ಐ ಸಂಸ್ಥೆಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಕೋರ್ಸಗಳನ್ನು ವಿದ್ಯಾಭ್ಯಾಸ ಮಾಡಲು ಸಂಪೂರ್ಣ ಕೋರ್ಸಗೆ ರೂ. 20 ಲಕ್ಷದವರೆಗೆ ಸಾಲವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳ ವಯಸ್ಸು 38 ವರ್ಷ ಮೀರಿರಬಾರದು. ನಿಗಮಕ್ಕೆ ಆಸ್ತಿಯ (ಕಟ್ಟಡ/ ಭೂಮಿ) ಅಡಮಾನದ ಮೇಲೆ ಮಾತ್ರ ಸಾಲವನ್ನು ಒದಗಿಸಲಾಗುತ್ತದೆ. ವಿದೇಶಿ ವಿದ್ಯಾಭ್ಯಾಸ (ಓವರ್ಸೀಸ್ ಎಜುಕೇಶನ್) ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್ kmdconline.karnataka.gov.in ನಲ್ಲಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಕೆಯು ಜೂನ್ 13ರಿಂದ ಪ್ರಾರಂಭಗೊಂಡಿದ್ದು, ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಪ್ಪಳ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ: 08539-225008ಗೆ ಸಂಪರ್ಕಿಸಬಹುದು. ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿ, ತಮ್ಮ ಮೂಲ ದಾಖಲೆಗಳನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು ಎಂದು ಕೆ.ಎಂ.ಡಿ.ಸಿ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KMDCONLINE.KARNATAKA.GOV
kmdconline.karnataka.gov