ಡಿ ಡಿ ನ್ಯೂಸ್. ಕೊಪ್ಪಳ : ಹಡಪದ ಅಪ್ಪಣ್ಣ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿಗಳಾದ ಬಸವಣ್ಣೆಪ್ಪ ಕಲಶೆಟ್ಟಿ ಅವರು ಹೇಳಿದರು.
ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಕುರಿತಂತೆ ಜೂನ್ 23ರಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತದಿಂದ ಹಡಪದ ಅಪ್ಪಣ್ಣ ಜಯಂತಿಯ ವೇದಿಕೆಯ ಕಾರ್ಯಕ್ರಮವನ್ನು ಜುಲೈ 03ರ ಬೆಳಿಗ್ಗೆ 11ಕ್ಕೆ ಸಾಹಿತ್ಯ ಭವನದಲ್ಲಿ ಅಚ್ಚುಕಟ್ಟಾಗಿ ಏರ್ಪಾಡು ಮಾಡಬೇಕು. ಸಂಬಂಧಿಸಿದ ಅಧಿಕಾರಿಗಳು ಕಾರ್ಯಕ್ರಮವು ಶಿಷ್ಠಾಚಾರ ಪಾಲನೆ ಜೊತೆಗೆ ಸುವ್ಯವಸ್ಥಿತವಾಗಿ ನಡೆಯುವಂತೆ ಅಗತ್ಯ ಏರ್ಪಾಡು ಮಾಡಬೇಕು ಎಂದು ತಿಳಿಸಿದರು.
ಹಡಪದ ಅಪ್ಪಣ್ಣರ ಜಯಂತಿಯಲ್ಲಿ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಹಾಗೂ ಜಿಲ್ಲಾಡಳಿತಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಉಪವಿಭಾಗಾಧಿಕಾರಿಗಳು ಸಭೆಯ ಮೂಲಕ ಮನವಿ ಮಾಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರದ ಕೊಟ್ರೇಶ್ ಮರಬನಳ್ಳಿ, ಹಿರಿಯರಾದ ಬಸಪ್ಪ ಹಲಗೇರಿ, ಸಮಾಜದ ಮುಖಂಡರಾದ ಮಂಜುನಾಥ ಹಂದ್ರಾಳ, ದ್ಯಾಮಣ್ಣ ಮಾದಿನೂರು, ಮಾರ್ಕಂಡೆಪ್ಪ ಗಿಣಿಗೇರಿ, ಶರಣಪ್ಪ ಇಟಗಿ, ಗವಿಸಿದ್ದಪ್ಪ ಗುಳದಳ್ಳಿ, ಬಾಳಪ್ಪ, ಅನ್ನಪೂರ್ಣಮ್ಮ ಮನ್ನಾಪುರ ಹಾಗೂ ಹಲವು ಗಣ್ಯರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.