deshadoothanews

ಕೊಪ್ಪಳ ತಾ.ಪಂ 1ನೇ ತ್ರೈಮಾಸಿಕ ಕೆಡಿಪಿ ಸಭೆ ಜೂನ್ 30ಕ್ಕೆ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ :
ಕೊಪ್ಪಳ ತಾಲೂಕು ಪಂಚಾಯತ್ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ 20 ಅಂಶಗಳು ಸೇರಿದಂತೆ 2023-24ನೇ ಸಾಲಿನ 1ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜೂನ್ 30ರಂದು ಬೆಳಿಗ್ಗೆ 10.30ಗಂಟೆಗೆ ತಾ.ಪಂ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕೊಪ್ಪಳ ಶಾಸಕರಾದ ರಾಘವೇಂದ್ರ ಹಿಟ್ನಾಳ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಹಾಗೂ ಅನಿವಾರ್ಯ ಕಾರಣಗಳಿಂದ ಸಭೆಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ಶಾಸಕರ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave A Reply

Your email address will not be published.