ಕೊಪ್ಪಳ ತಾಲೂಕು: 38 ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ
ಡಿ ಡಿ ನ್ಯೂಸ್. ಕೊಪ್ಪಳ
ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ತಾಲೂಕಿನ 38 ಗ್ರಾಮ ಪಂಚಾಯತಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿಗಾಗಿ ಜೂನ್ 21ರಂದು ಕೊಪ್ಪಳದ ಬಹದ್ದೂರಬಂಡಿ ರಸ್ತೆಯಲ್ಲಿನ ಮಹಾವೀರ ಕಲ್ಯಾಣ ಮಂಟಪದಲ್ಲಿ ಆಯಾ ಗ್ರಾಮ ಪಂಚಾಯತ್‌ಗಳ ಸದಸ್ಯರ ಸಭೆ ನಡೆಯಿತು.
ಕೊಪ್ಪಳ ತಾಲೂಕಿನಲ್ಲಿ 38 ಗ್ರಾಮ ಪಂಚಾಯತಗಳ ಅಧ್ಯಕ್ಷ ಸ್ಥಾನಗಳಲ್ಲಿ ಅನುಸೂಚಿತ ಜಾತಿಗೆ 10 ಸ್ಥಾನಗಳು (ಈ ಪೈಕಿ 5 ಸ್ಥಾನಗಳು ಮಹಿಳೆಯರಿಗೆ)., ಅನುಸೂಚಿತ ಪಂಗಡ 05 ಸ್ಥಾನಗಳು (ಈ ಪೈಕಿ ಮಹಿಳೆಯರಿಗೆ 3 ಸ್ಥಾನಗಳು)., ಹಿಂದುಳಿದ ವರ್ಗ ‘ಅ’ 3 ಸ್ಥಾನಗಳು (ಈ ಪೈಕಿ ಮಹಿಳೆಯರಿಗೆ 2 ಸ್ಥಾನಗಳು) ಹಿಂದುಳಿದ ವರ್ಗ ‘ಬ’ ಗೆ 1 ಸ್ಥಾನ., ಸಾಮಾನ್ಯ ವರ್ಗಕ್ಕೆ 19 ಸ್ಥಾನಗಳಿಗೆ (ಈ ಪೈಕಿ 09 ಸ್ಥಾನಗಳು ಮಹಿಳೆಯರಿಗೆ) ಮೀಸಲು ನಿಗದಿಪಡಿಸಬೇಕಿದೆ. ಅದೇ ರೀತಿ 38 ಉಪಾಧ್ಯಕ್ಷ ಸ್ಥಾನಗಳಲ್ಲಿ ಅನುಸೂಚಿತ ಜಾತಿಗೆ 10 ಸ್ಥಾನಗಳು (ಈ ಪೈಕಿ 5 ಸ್ಥಾನಗಳು ಮಹಿಳೆಯರಿಗೆ)., ಅನುಸೂಚಿತ ಪಂಗಡ 05 ಸ್ಥಾನಗಳು (ಈ ಪೈಕಿ ಮಹಿಳೆಯರಿಗೆ 03 ಸ್ಥಾನಗಳು)., ಹಿಂದುಳಿದ ವರ್ಗ ‘ಅ’ 3 ಸ್ಥಾನಗಳು (ಈ ಪೈಕಿ ಮಹಿಳೆಯರಿಗೆ 2 ಸ್ಥಾನಗಳು) ಹಿಂದುಳಿದ ವರ್ಗ ‘ಬ’ ಗೆ 1 ಸ್ಥಾನ., ಸಾಮಾನ್ಯ ವರ್ಗಕ್ಕೆ 19 ಸ್ಥಾನಗಳು (ಈ ಪೈಕಿ 09 ಸ್ಥಾನಗಳು ಮಹಿಳೆಯರಿಗೆ) ಸ್ಥಾನಗಳಿಗೆ ಮೀಸಲು ನಿಗದಿಪಡಿಸಬೇಕಿದೆ ಎಂದು ನಿರ್ದೇಶಿಸಿ ರಾಜ್ಯ ಚುನಾವಣಾ ಆಯೋಗವು ಆದೇಶ ಮಾಡಿದೆ. ಅದರಂತೆ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರ ಸಮ್ಮುಖದಲ್ಲಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಯಿತು.
*ಗ್ರಾಮ ಪಂಚಾಯತ್‌ವಾರು ವಿವಿರ:* ಕವಲೂರು ಗ್ರಾಮ ಪಂಚಾಯತ್‌ಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಟಿ., ಹಟ್ಟಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ., ಅಳವಂಡಿ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಟಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ಬೋಚನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಪ್ರವರ್ಗ-ಎ ಮಹಿಳೆ., ಬೆಟಗೇರಿ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಸಿ ಹಾಗು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ಮತ್ತೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ., ಕಾತರಕಿಗುಡ್ಲಾನೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ., ಬಿಸರಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ.,
ಹಿರೇಸಿಂಧೋಗಿ ಗ್ರಾಪಂ ಅಧ್ಯಕ್ಷ ಸ್ಥಾನ ಎಸಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ಕೋಳೂರು ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ., ಹಲಗೇರಾ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಸಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ಓಜನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಪ್ರವರ್ಗ-ಎ ಮಹಿಳೆ., ಮಾದಿನೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ., ಕಿನ್ನಾಳ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಸಿ., ಲೇಬಗೇರಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಸಿ., ಇರಕಲ್ಲಗಡ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ., ಚಿಕ್ಕಬೊಮ್ಮನಾಳ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ., ಹಾಸಗಲ್ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ತಾವರಗೇರಾ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಸಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ಇಂದರಗಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಟಿ., ಬೂದಗುಂಪಾ ಗ್ರಾಪಂ ಅಧ್ಯಕ್ಷ ಸ್ಥಾನ ಪ್ರವರ್ಗ-ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಪ್ರವರ್ಗ-ಬಿ., ಬಂಡಿಹರ್ಲಾಪುರ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ., ಶಿವಪುರ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಸಿ.,
ಹುಲಿಗಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಪ್ರವರ್ಗ-ಎ., ಮುನಿರಾಬಾದ ಯೋಜನಾ ಗ್ರಾಮ ಗ್ರಾಪಂ ಅಧ್ಯಕ್ಷ ಸ್ಥಾನ ಪ್ರವರ್ಗ-ಎ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ.,
ಹೊಸಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗು ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ., ಅಗಳಕೇರಾ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಟಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ಹಿಟ್ನಾಳ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ., ಗುಳದಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ., ಗಿಣಿಗೇರಾ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ., ಹಿರೇಬಗನಾಳ ಗ್ರಾಪಂ ಅಧ್ಯಕ್ಷ ಸ್ಥಾನ ಪ್ರವರ್ಗ-ಬಿ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ.,
ಕುಣಿಕೇರಿ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ., ಗೊಂಡಬಾಳ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಸಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ಬಹದ್ದೂರಬಂಡಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ಹಾಲವರ್ತಿ ಗ್ರಾಪಂ ಅಧ್ಯಕ್ಷ ಸ್ಥಾನ ಪ್ರವರ್ಗ-ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಸಿ., ಕಲಕೇರಾ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ., ಬೇವಿನಹಳ್ಳಿ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ.,
ವಣಬಳ್ಳಾರಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಸಿಗೆ ಮೀಸಲಾತಿ ನಿಗದಿಪಡಿಸಲಾಯಿತು.
ಈ ಸಂದರ್ಭದಲ್ಲಿ ಕೊಪ್ಪಳ ತಹಶೀಲ್ದಾರರಾದ ಅಮರೇಶ ಬಿರಾದಾರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.