deshadoothanews

ಮೀಸಲಾತಿ ನಿಗದಿಗಾಗಿ ಕನಕಗಿರಿ, ಕಾರಟಗಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಸಭೆ ಜೂನ್ 17ಕ್ಕೆ

ಡಿ ಡಿ ನ್ಯೂಸ್. ಕೊಪ್ಪಳ

0

ಡಿ ಡಿ ನ್ಯೂಸ್. ಕೊಪ್ಪಳ :

ಕನಕಗಿರಿ ತಾಲೂಕಿನ 11 ಗ್ರಾಮ ಪಂಚಾಯಿತಿಗಳಿಗೆ ಮತ್ತು ಕಾರಟಗಿ ತಾಲೂಕಿನ 13 ಗ್ರಾಮ ಪಂಚಾಯತಗಳಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿಯನ್ನು ಗ್ರಾಮ ಪಂಚಾಯತಿ ಸದಸ್ಯರ ಸಮ್ಮುಖದಲ್ಲಿ ನಿಗದಿಪಡಿಸಬೇಕಾಗಿದೆ. ಈ ಸಂಬಂಧ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರ ಸಭೆ ನಡೆಸಲು ದಿನಾಂಕ ಹಾಗೂ ಸ್ಥಳ ನಿಗದಿಪಡಿಸಲಾಗಿದೆ.

ಕನಕಗಿರಿ ತಾಲೂಕಿಗೆ ಸಂಬಂಧಿಸಿದ ಸಭೆಯು ಜೂನ್ 17ರಂದು ಬೆಳಗ್ಗೆ 10.30ರಿಂದ ಕನಕಗಿರಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಮುದಾಯ ಭವನದಲ್ಲಿ ಸಭೆ ನಡೆಯಲಿದೆ. ಕಾರಟಗಿ ತಾಲೂಕಿಗೆ ಸಂಬಂಧಿಸಿದ ಸಭೆಯು ಸಹ ಜೂನ್ 17ರಂದು ಮಧ್ಯಾಹ್ನ 3 ಗಂಟೆಯಿಂದ ಕಾರಟಗಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಮುದಾಯ ಭವನದಲ್ಲಿ ನಡೆಯಲಿದೆ.

ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ, 1993ರ ಪ್ರಕರಣ 44(2)ರನ್ವಯ ಗ್ರಾಮ ಪಂಚಾಯಿತಿಗಳಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ವರ್ಗವಾರು ಸಂಖ್ಯೆಯನ್ನು ನಿಗದಿಪಡಿಸಿರುವುದರಿಂದ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಈ ಪ್ರಯುಕ್ತ ಸಂಬಂಧಪಟ್ಟ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು ಸದರಿ ಆಯಾ ದಿನಾಂಕಗಳಂದು ಆಯಾ ತಾಲ್ಲೂಕಾ ಕೇಂದ್ರಗಳಲ್ಲಿ ನಿಗದಿಪಡಿಸಿದ ಸ್ಥಳಗಳಲ್ಲಿ ಉಪಸ್ಥಿತರಿರಲು ಕೋರಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave A Reply

Your email address will not be published.