ಡಿ ಡಿ ನ್ಯೂಸ್. ಕೊಪ್ಪಳ :
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸೂಚನೆಯಂತೆ, ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಪಂ ವ್ಯಾಪ್ತಿಯ ಹುಲಸನಹಟ್ಟಿ ಗ್ರಾಮದಲ್ಲಿ ಕುಡಿಯುವ ನೀರಿನ ತಪಾಸಣೆ ನಡೆಸಿ ನೀರು ಪೂರೈಕೆ ಸೇರಿದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕನಕಗಿರಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಬಿ ಕಂದಕೂರ ಅವರು ತಿಳಿಸಿದ್ದಾರೆ.
ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಪಂ ವ್ಯಾಪ್ತಿಯ ಹುಲಸನಹಟ್ಟಿ ಗ್ರಾಮದಲ್ಲಿ ಒಟ್ಟು ಮೂರು ಬೋರ್‌ವೆಲ್‌ಗಳು ಇದ್ದು ನೀರನ್ನು ತಪಾಸಣೆ ಮಾಡಲಾಗಿದೆ. ಎರಡು ಬೋರ್‌ವೆಲ್‌ಗಳ ನೀರು ಕುಡಿಯಲು ಯೋಗ್ಯವಿದ್ದು, ಒಂದು ಬೋರ್‌ವೆಲ್ ನೀರು ಕುಡಿಯಲು ಯೋಗ್ಯವಿಲ್ಲ ಎಂದು ವರದಿ ಬಂದಿದೆ. ಯೋಗ್ಯವಿಲ್ಲದ ಬೋರ್‌ವೆಲ್ ನೀರನ್ನು ಬಂದ್ ಮಾಡಲಾಗಿದ್ದು, ಎರಡು ಬೋರ್‌ವೆಲ್‌ಗಳಿಂದ ಮಾತ್ರ ನೀರನ್ನು ಗ್ರಾಮಕ್ಕೆ ಸರಬರಾಜು ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬೋರ್‌ವೆಲ್‌ಗಳ ಸುತ್ತ ಸಿಮೆಂಟ್ ಮೂಲಕ ಕಟ್ಟೆಗಳನ್ನು ನಿರ್ಮಿಸಿ ಭದ್ರಪಡಿಸಲಾಗಿದೆ. ವಿವಿಧ ಇಲಾಖೆಗಳ ಸಹಕಾರ ಪಡೆದು ಗ್ರಾಮದಲ್ಲಿ ಮನೆಮನೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಆರೋಗ್ಯ ಕುರಿತು ಜಾಗೃತಿ ಮೂಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.