deshadoothanews

ವಿದ್ಯಾರ್ಥಿಗಳ ಕಲಿಕೆಯ ಸುಧಾರಣೆಗೆ ಟ್ಯೂಷನ್‌ ಕ್ಲಾಸ್‌ ಅನುಕೂಲ: ಸತೀಶ್ ಸಲಹೆ

Tuition classes are beneficial for improving student learning: Satish advises

0
    • ಡಿ.ಡಿ ನ್ಯೂಸ್ ಯಲಬುರ್ಗಾ:

ಎಸ್ಸೆಸ್ಸಿಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಸಲುವಾಗಿ ಧಮ ೯ಸ್ಥಳ ಗ್ರಾಮಾಭಿವೃದ್ಧಿ ಯೋಜ ನೆಯ ಜ್ಞಾನ ವಿಕಾಸ ಕೇಂದ್ರದಿಂದ ಟ್ಯೂಷನ್ ಕ್ಲಾಸ್ ಜಾರಿ ಮಾಡಿದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸುಧಾರಣಗೆ ತುಂಬಾ ಅನುಕೂಲವಾಗಿವೆ. ಇದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದು ಕೊಳ್ಳುವಂತೆ ಯೋಜನಾಧಿಕಾರಿ ಸತೀಶ ಗಾಂವಾಕಾರ ಸಲಹೆ ನೀಡಿದರು. ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಶ್ರೀಮತಿ ನೀಲಮ್ಮ ಶಿವಶಂಕರರಾವ್ ದೇಸಾಯಿ ಸರಕಾರಿ ಪ್ರೌಢ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದಿಂದ ಹಮ್ಮಿಕೊಂಡಿದ್ದ ಟ್ಯೂಷನ್ ಕ್ಲಾಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಹಿಂದೆ ತಾಲ್ಲೂಕಿನ ಹಲವು ಶಾಲೆಗಳಲ್ಲಿ ಟ್ಯೂಷನ್ ಕ್ಲಾಸ್ ನಡೆಸುತ್ತಿದ್ದರಿಂದ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆಯಲು ಸಹಕಾರಿಯಾಗಿದೆ. ಅದೇ ರೀತಯಾಗಿ ಶಾಲೆಯಲ್ಲಿ ಹಮ್ಮಿಕೊಂಡ ವಿಶೇಷ ತರಗತಿಯಲ್ಲಿ ತಾವುಗಳು ಆಸಕ್ತಿ ವಹಿಸಿ, ನೂರಕ್ಕೆ ನೂರರಷ್ಟು ಫಲಿತಾಂಶ ನೀವೆಲ್ಲರೂ ಪಡೆಯಬೇಕು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ದಾರಿ ದೀಪವಾಗಿದೆ. ಹೆಗ್ಗಡೆ ದಂಪ ತಿಗಳು ಮಹಿಳೆಯರ ಸಬಲೀಕ ರಣದ ಜೊತೆಗೆ ಅನೇಕ ಸಮಾಜಮುಖಿ ಕಾರ್ಯಕ್ರಮ ಕೈಗೊಳ್ಳುವ ಮೂಲಕ ಸಮಾಜದಲ್ಲಿ ಮಾದರಿಯಾಗಿದೆ. ಅಲ್ಲದೇ ಮಕ್ಕಳ ಶೈಕ್ಷಣಿಕ ಕ್ಷೇತ್ರದ ಸುಧಾರಣೆಗಾಗಿ ಟ್ಯೂಷನ್ ಕ್ಲಾಸ್ ಆರಂಭಿಸಿದ್ದು, ಮಕ್ಕಳ ಶಿಕ್ಷಣ ಕ್ಷೇತ್ರ ಸುಧಾರಣೆಗೆ ಮುಂದಾಗಿದೆ ಎಂದರು.

ಶಾಲೆಯ ಮುಖ್ಯ ಶಿಕ್ಷಕ ಸುರೇಶ ವೇದಪಾಠಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್ಟಿಎಂಸಿ ಅಧ್ಯಕ್ಷ ಈರಪ್ಪ ಕುಡುಗುಂಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾ.ಪಂ ಸದಸ್ಯ ಶರಣಕುಮಾರ ಅಮರಗಟ್ಟಿ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಗೀತಾ ಮಾತನಾಡಿದರು.


ಸಮಾರಂಭದಲ್ಲಿ ಗ್ರಾ.ಪಂ ಸದಸ್ಯ ಯಮನೂರಪ್ಪ ಕುರಿ, ಎಸ್ಟಿಎಂಸಿ ಸದಸ್ಯ ಪ್ರಭು ಮೇಟಿ, ಒಕ್ಕೂಟದ ಅಧ್ಯಕ್ಷೆ ಗೀತಾ ಕಿರ್ದಿ, ಮೇಲ್ವಿಚಾರಕಿ ಚನ್ನಮ್ಮ, ಸೇವಾ ಪ್ರತಿನಿಧಿ ಸಂಗನಗೌಡ ರಾಮಡಗಿ, ಶಿಕ್ಷಕಿ ನೇತ್ರಾವತಿ ಸೇರಿದಂತೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು‌.

 

ಶರಣಕುಮಾರ್ ಅಮರಗಟ್ಟಿ.

Leave A Reply

Your email address will not be published.