deshadoothanews

ಯಲಬುರ್ಗಾ ತಾಲೂಕು: 22 ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ : ಯಲಬುರ್ಗಾ ತಾಲೂಕಿನ 22 ಗ್ರಾಮ ಪಂಚಾಯತಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿಗಾಗಿ ಜೂನ್ 20ರಂದು ಯಲಬುರ್ಗಾದ ಬುದ್ಧ, ಬಸವ, ಅಂಬೇಡ್ಕರ್ ಸಮುದಾಯ ಭವನದಲ್ಲಿ ಆಯಾ ಗ್ರಾಮ ಪಂಚಾಯತಗಳ ಸದಸ್ಯರ ಸಭೆ ನಡೆಯಿತು.
ಯಲಬುರ್ಗಾ ತಾಲೂಕಿನಲ್ಲಿ 22 ಗ್ರಾಮ ಪಂಚಾಯತಗಳ ಅಧ್ಯಕ್ಷ ಸ್ಥಾನಗಳಲ್ಲಿ ಅನುಸೂಚಿತ ಜಾತಿಗೆ 4 ಸ್ಥಾನಗಳು (ಈ ಪೈಕಿ 2 ಸ್ಥಾನಗಳು ಮಹಿಳೆಯರಿಗೆ)., ಅನುಸೂಚಿತ ಪಂಗಡ 3 ಸ್ಥಾನಗಳು (ಈ ಪೈಕಿ 2 ಸ್ಥಾನಗಳು ಮಹಿಳೆಯರಿಗೆ)., ಹಿಂದುಳಿದ ವರ್ಗ ‘ಅ’ 3 ಸ್ಥಾನಗಳು (ಈ ಪೈಕಿ 2 ಸ್ಥಾನಗಳು ಮಹಿಳೆಯರಿಗೆ)., ಹಿಂದುಳಿದ ವರ್ಗ ‘ಬ’ ಗೆ 1 ಸ್ಥಾನ., ಸಾಮಾನ್ಯ ವರ್ಗಕ್ಕೆ 11 ಸ್ಥಾನಗಳು (ಈ ಪೈಕಿ 5 ಸ್ಥಾನಗಳು ಮಹಿಳೆಯರಿಗೆ) ಸ್ಥಾನಗಳಿಗೆ ಮೀಸಲು ನಿಗದಿಪಡಿಸಬೇಕಿದೆ. ಅದೇ ರೀತಿ 22 ಉಪಾಧ್ಯಕ್ಷ ಸ್ಥಾನಗಳಲ್ಲಿ ಅನುಸೂಚಿತ ಜಾತಿಗೆ 4 ಸ್ಥಾನಗಳು (ಈ ಪೈಕಿ 2 ಸ್ಥಾನಗಳು ಮಹಿಳೆಯರಿಗೆ)., ಅನುಸೂಚಿತ ಪಂಗಡಕ್ಕೆ 3 ಸ್ಥಾನಗಳು (ಈ ಪೈಕಿ 2 ಸ್ಥಾನಗಳು ಮಹಿಳೆಯರಿಗೆ)., ಹಿಂದುಳಿದ ವರ್ಗ ‘ಅ’ 3 ಸ್ಥಾನಗಳು (ಈ ಪೈಕಿ 2 ಸ್ಥಾನಗಳು ಮಹಿಳೆಯರಿಗೆ)., ಹಿಂದುಳಿದ ವರ್ಗ ‘ಬ’ ಗೆ 1 ಸ್ಥಾನ., ಸಾಮಾನ್ಯ ವರ್ಗಕ್ಕೆ 11 ಸ್ಥಾನಗಳು (ಈ ಪೈಕಿ 5 ಸ್ಥಾನಗಳು ಮಹಿಳೆಯರಿಗೆ) ಸ್ಥಾನಗಳಿಗೆ ಮೀಸಲು ನಿಗದಿಪಡಿಸಬೇಕಿದೆ ಎಂದು ನಿರ್ದೇಶಿಸಿ ರಾಜ್ಯ ಚುನಾವಣಾ ಆಯೋಗವು ಆದೇಶ ಮಾಡಿದೆ. ಅದರಂತೆ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರ ಸಮ್ಮುಖದಲ್ಲಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಯಿತು.
ಗ್ರಾ.ಪಂ.ವಾರು ವಿವಿರ: ಮುಧೋಳ ಗ್ರಾಮ ಪಂಚಾಯತ್‌ಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್‌ಸಿ., ಕರಮುಡಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ಹಿರೇಮ್ಯಾಗೇರಿ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಸಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ಬಳ್ಳೂಟಗಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಟಿ., ಬಂಡಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಪ್ರವರ್ಗ-ಎ., ಗೆದಗೇರಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆ., ವಜ್ರಬಂಡಿ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಹಿರೇಅರಳಿಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆ., ಮಾಟಲದಿನ್ನಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ಹಿರೇವಂಕಲಕುಂಟಾ ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ., ತಾಳಕೇರಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಪ್ರವರ್ಗ-ಎ ಮಹಿಳೆ., ಗಾಣದಾಳ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ., ಗುನ್ನಾಳ ಗ್ರಾಪಂ ಅಧ್ಯಕ್ಷ ಸ್ಥಾನ ಪ್ರವರ್ಗ-ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಪ್ರವರ್ಗ-ಬಿ., ಬೇವೂರ ಗ್ರಾಪಂ ಅಧ್ಯಕ್ಷ ಸ್ಥಾನ ಪ್ರವರ್ಗ-ಬಿ ಹಾಗೂ ಉಪಾಧ್ಯಕ್ಷ ಸ್ಥಾನ ಪ್ರವರ್ಗ-ಎ ಮಹಿಳೆ., ವಣಗೇರಿ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ., ಮುರಡಿ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಸಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ಚಿಕ್ಕಮ್ಯಾಗೇರಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ., ಸಂಗನಾಳ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ಕಲ್ಲೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ., ತುಮ್ಮರಗುದ್ದಿ ಗ್ರಾಪಂ ಅಧ್ಯಕ್ಷ ಸ್ಥಾನ ಪ್ರವರ್ಗ-ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಸಿ., ಬೋದೂರು ಗ್ರಾಪಂ ಅಧ್ಯಕ್ಷ ಸ್ಥಾನ ಪ್ರವರ್ಗ-ಎ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ., ಸಂಕನೂರು ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‌ಟಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾತಿ ನಿಗದಿಪಡಿಸಲಾಯಿತು.
ಈ ಸಂದರ್ಭದಲ್ಲಿ ಯಲಬುರ್ಗಾ ತಹಶೀಲ್ದಾರರಾದ ವಿಠ್ಠಲ್ ಚೌಗಲಾ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂತೋಷ ಬಿರಾದರ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.
Leave A Reply

Your email address will not be published.