deshadoothanews

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏಪ್ರಿಲ್ 23ರಂದು ಜಿಲ್ಲಾ ಮಟ್ಟದ ಬಸವ ಜಯಂತಿ ಆಚರಿಸಲಾಯಿತು.

0
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ, ಆಹಾರ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ, ಜಿಲ್ಲಾ ವಯಸ್ಕರ್ ಶಿಕ್ಷಣಾಧಿಕಾರಿಗಳಾದ ಉಮಾದೇವಿ ಸೊನ್ನದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಮತ್ತಿತರರು ಇದ್ದರು.
*ಪುತ್ಥಳಿಗೆ ಮಾಲಾರ್ಪಣೆ:* ಬಸವ ಜಯಂತಿ ಪ್ರಯುಕ್ತ ಹೊಸಪೇಟೆ ರಸ್ತೆಯಲ್ಲಿರುವ ಕಿಶೋರಿ ಪೆಟ್ರೋಲ್ ಬಂಕ್ ಹಿಂಭಾಗದ ನಗರಸಭೆಯ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನವನದಲ್ಲಿರುವ ಮಹನೀಯರ ಪುತ್ಥಳಿಗೆ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಮತ್ತು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ ಅವರು ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ ಮಹನೀಯರಿಗೆ ಗೌರವ ಸಮರ್ಪಿಸಿದರು. ಬಳಿಕ ಗಂಜ್ ಸರ್ಕಲ್‌ನಲ್ಲಿರುವ ಬಸವೇಶ್ವರ ಪುತ್ಥಳಿಗೂ ಸಹ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಲಾಯಿತು.
ಈ ವೇಳೆ ಆಹಾರ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ, ಡಿವೈಎಸ್ಪಿ ಶರಣಪ್ಪ ಸುಬೇದಾರ, ತಹಶೀಲ್ದಾರರಾದ ಅಮರೇಶ ಬಿರಾದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಕೊಪ್ಪಳ ನಗರಸಭೆ ಪೌರಾಯುಕ್ತರಾದ ಭಜಕ್ಕನವರ್ ಸೇರಿದಂತೆ ಮತ್ತಿತರರಿದ್ದರು.
Leave A Reply

Your email address will not be published.