deshadoothanews

ಇಂದು ಸಚಿವ ಶ್ರೀರಾಮುಲು ರೋಡ್ ಶೋ

ಡಿ ಡಿ ನ್ಯೂಸ್. ಕೊಪ್ಪಳ

0

ಡಿ ಡಿ ನ್ಯೂಸ್. ಕೊಪ್ಪಳ

ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಅವರ ಪರವಾಗಿ ಏ.29ರಂದು ಸಂಜೆ 7ಗಂಟೆಗೆ ನಗರದಲ್ಲಿ ಸಚಿವ ಬಿ.ಶ್ರೀರಾಮುಲು ರೋಡ್ ಶೋ ನಡೆಸಲಿದ್ದಾರೆ.
ನಗರದ ಪ್ರಮುಖ ರಸ್ತೆಗಳಲ್ಲಿ ಸಚಿವ ಬಿ.ಶ್ರೀರಾಮುಲು ಅವರು ಸಂಜೆ 7 ರಿಂದ 8 ಗಂಟೆ ವರೆಗೆ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಪ್ರಮುಖ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಸಂಸದ ಕರಡಿ ಸಂಗಣ್ಣ, ಬಿಜೆಪಿ ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಅವರು ಭಾಗವಹಿಸಲಿದ್ದಾರೆ.
ರೋಡ್ ಶೋ ನಲ್ಲಿ ಯುವಕರು, ಮಹಿಳೆಯರು, ಹಿರಿಯರು, ಬಿಜೆಪಿ ಪದಾಧಿಕಾರಿಗಳು, ಕೊಪ್ಪಳ ನಗರ ಸೇರಿ ಗ್ರಾಮೀಣ ಭಾಗದ ಸುಮಾರು 25 ಸಾವಿರ ಜನರು ಭಾಗವಹಿಸಲಿದ್ದಾರೆ.
Leave A Reply

Your email address will not be published.