deshadoothanews

ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಗಳ ಪ್ರಗತಿ ಪರಿಶೀಲನೆ

ಡಿ ಡಿ ನ್ಯೂಸ್. ಕೊಪ್ಪಳ

0

ಡಿ ಡಿ ನ್ಯೂಸ್.  ಕೊಪ್ಪಳ

ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧೀನಿಯಮ 2013ರನ್ವಯ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ ವರ್ಗಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯು ಕರ್ನಾಟಕ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆ ಅಧಿನಿಯಮ 2013ರ ಜಿಲ್ಲಾಮಟ್ಟದ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುAದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಏಪ್ರೀಲ್ 28ರಂದು ನಡೆಯಿತು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು, 2022-23ನೇ ಸಾಲಿಗೆ ಸಂಬAಧಿಸಿದAತೆ ಮಾರ್ಚ 2023ರ ಅಂತ್ಯದವರೆಗೆ ಬಿಡುಗಡೆಯಾದ ಅನುದಾನ ಪ್ರಗತಿ ಪರಿಶೀಲನೆ ನಡೆಸಿದರು.

 

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳ ಅನುಷ್ಠಾನವು ನಿಗದಿಪಡಿಸಿದ ಕಾಲಮಿತಿಯೊಳಗೆ ಆಗಬೇಕು. ಮುಂದುವರೆಸಿಕೊಡು ಹೋಗಲು ಅವಕಾಶವಿರುವುದಿಲ್ಲ ಎಂಬುದನ್ನು ಪ್ರತಿಯೊಂದು ಇಲಾಖೆಯ ಅನುಷ್ಠಾನಾಧಿಕಾರಿಗಳು ಅರಿಯಬೇಕು ಎಂದು ತಿಳಿಸಿದರು.

2023-24ನೇ ಸಾಲಿನಲ್ಲಿ ಸಹ ಆರಂಭದಿದಲೇ ಯೋಜನೆ ರೂಪಿಸಬೇಕು. ಕ್ರಿಯಾಯೋಜನೆ ತಯಾರಿಸುವಾಗ ಸಾಕಷ್ಟು ಮುತುವರ್ಜಿ ವಹಿಸಬೇಕು. ಫಲಾನುಭವಿಗಳ ಆಯ್ಕೆ ವಿಷಯದಲ್ಲಿ ಪಾರದರ್ಶಕತೆ ಇರಬೇಕು. ಭೌತಿಕ ಹಾಗೂ ಆರ್ಥಿಕ ಪ್ರಗತಿಯನ್ನು ಕಾಲಕಾಲಕ್ಕೆ ಆನ್‌ಲೈನದಲ್ಲಿ ಅಪಲೋಡ್ ಮಾಡಲು ಒತ್ತು ಕೊಡಬೇಕು ಎಂದು ಸೂಚಿಸಿದರು. ಎಸ್ಸಿಪಿ ಮತ್ತು ಟಿಎಸ್ಪಿ ಅನುಷ್ಠಾನ ವಿಷಯದಲ್ಲಿ ಯಾರಾದರು ಅಧಿಕಾರಿಗಳು ಪದೇಪದೆ ನಿರ್ಲಕ್ಷ ತೋರುವುದು ಕಂಡುಬದಲ್ಲಿ ಯಾವುದೇ ಮುಲಾಜಿಲ್ಲದೇ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.

ಸಕಾಲ ಅರ್ಜಿಗಳ ಸ್ಥಿತಿಗತಿ ಪರಿಶೀಲನೆ: ಏಪ್ರೀಲ್ 28ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಕಾಲ ಅರ್ಜಿಗಳ ಸ್ಥಿತಿಗತಿ ಪರಿಶೀಲನೆ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಹಂತದಲ್ಲಿ ಪರಿಶೀಲನೆ ನಡೆಸಿ ಸಕಾಲ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಹ ಒತ್ತು ಕೊಡಬೇಕು ಎಂದು ಸೂಚಿಸಿದರು. ಆಯಾ ಇಲಾಖೆಗಳು ತಮಗೆ ಸಂಬಧಿಸಿದ ನಾಗರಿಕ ಸಂಬಧಿ ಸೇವೆಗಳನ್ನು ಗೊತ್ತು ಮಾಡಿದ ಕಾಲ ಮತ್ತು ಅವಧಿಯಲ್ಲಿ ವಿಲೇ ಮಾಡುವುದಕ್ಕೆ ಒತ್ತು ಕೊಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ. ಕಡಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ತಾಪಂನ ನರೇಗಾ ಸಹಾಯಕ ನಿರ್ದೇಶಕರು ಮತ್ತು ಇನ್ನೀತರ ಅಧಿಕಾರಿಗಳು ಇದ್ದರು.

Leave A Reply

Your email address will not be published.