deshadoothanews

ಲಂಬಾಣಿ ಹಾಡುಗಳ ಮೂಲಕ ಮತದಾನ ಜಾಗೃತಿ

ಡಿ ಡಿ ನ್ಯೂಸ್. ಕೊಪ್ಪಳ

0

ಡಿ ಡಿ ನ್ಯೂಸ್. ಕಾರಟಗಿ

ಲಂಬಾಣಿ ಸಮುದಾಯದ ಮಹಿಳೆಯರು ತಮ್ಮ ವಿಶೇಷ ಧಿರಿಸಿನಲ್ಲಿ ಹಾಗೂ ಅಜ್ಜಿಯರು ಸಾಂಪ್ರದಾಯಿಕ ಶೈಲಿಯ ಉಡುಪು ಧರಿಸಿ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ಮತದಾನದ ಜಾಗೃತಿ ಫಲಕಗಳನ್ನು ಪ್ರದರ್ಶಿಸಲಾಯಿತು. ಮತದಾನದ ಗೀತೆಗಳನ್ನು ಪ್ರಚುರ ಪಡಿಸುವ ಮೂಲಕ ಸಹ ಜಾಗೃತಿ ಮೂಡಿಸಲಾಯಿತು. ಮೇಣದ ಬತ್ತಿ ಬೆಳಗಿಸುವ ಮೂಲಕವು ಸಹ ಮತದಾನದ ಜಾಗೃತಿ ಮೂಡಿಸಲಾಯಿತು.

ಬೆನ್ನೂರು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಭಾಗ್ಯೇಶ್ವರಿ ಅವರು ಮಾತನಾಡಿ, ಸಂವಿಧಾನಾತ್ಮಕವಾಗಿ ಮತ ಹಾಕುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮತದಾನದಿಂದ ಯಾರು ಕುಡ ಹೊರಗುಳಿಯಬಾರದು. ನಮ್ಮ ಗ್ರಾಮ ಪಂಚಾಯತಿಯಲ್ಲಿ ಶೇ.100 ರಷ್ಟು ಮತದಾನವಾಗಲು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು. ಬಳಿಕ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ತಾಪಂ ಐಇಸಿ ಸಂಯೋಜಕರು, ಬೆನ್ನೂರು ಪ್ರಾಆಕೇ ಸಿಬ್ಬಂದಿ, ಗ್ರಾಮ ಪಂಚಾಯತಿ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಗ್ರಾಮಸ್ಥರು ಇದ್ದರು.

Leave A Reply

Your email address will not be published.