deshadoothanews

ಜಿಲ್ಲೆ ಎಲ್ಲಾ ಗ್ರಾಮಗಳಲ್ಲಿನ ನೀರಿನ ಸಂಗ್ರಹ, ನೀರಿನ ಮೂಲಗಳ ಸ್ವಚ್ಛತೆಗೆ ಒತ್ತು ಕೊಡಿ: ರಾಹುಲ್ ರತ್ನಂ ಪಾಂಡೆಯ*

ಡಿ ಡಿ ನ್ಯೂಸ್. ಕೊಪ್ಪಳ

0

 

ಡಿ ಡಿ ನ್ಯೂಸ್. ಕೊಪ್ಪಳ

: ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿನ ನೀರಿ ಸಂಗ್ರಹ ಮತ್ತು ನೀರಿನ ಮೂಲಗಳ ಶುಚಿತ್ವಕ್ಕೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಜೂನ್ 07ರಂದು ಆರೋಗ್ಯ ಇಲಾಖೆ ಹಾಗೂ ತಾಪಂ ಇಓಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.

ವಾಂತಿ-ಬೇಧಿಯಿಂದಾಗಿ ಅಸ್ವಸ್ಥಗೊಂಡ ಜನರಿಗೆ ಸೂಕ್ತ ಚಿಕಿತ್ಸೆ ನೀಡಿ, ಅವಶ್ಯಕತೆಯಿದ್ದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪಿಡಿಓಗಳು ಆರೋಗ್ಯ ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರೊಂದಿಗೆ ಪ್ರತಿ ದಿನ ಒಂದೊಂದು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ವಾಂತಿ ಬೇಧಿ ಪ್ರಕರಣಗಳು ಕಂಡುಬರುವ ಕಡೆಗೆ ಕೂಡಲೇ

ಚಿಕಿತ್ಸೆಗೆ ಕ್ರಮ ವಹಿಸಬೇಕು. ವಿಶೇಷವಾಗಿ ಮಕ್ಕಳಲ್ಲಿ ವಾಂದಿ ಬೇಧಿ ಸಮಸ್ಯೆ ಕಂಡು ಬಂದಲ್ಲಿ ಅಂತಹ ಮಕ್ಕಳನ್ನು ಕೂಡಲೇ ಚಿಕಿತ್ಸೆಗೆ ದಾಖಲಿಸಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಡೊಂಗೂರ ಸಾರುವುದು, ಕಸವಿಲೇವಾರಿ ವಾಹನಗಳಲ್ಲಿ ಜಿಂಗಲ್ಸ್ ಪ್ರಸಾರ ಮೂಲಕ ಎಲ್ಲಾ ಗ್ರಾಮಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ತಾಪಂ ಇಓಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಾದ್ಯಂತ ಎಲ್ಲಾ ಹಳ್ಳಿಗಳಲ್ಲಿನ ಕುಡಿಯುವ ನೀರಿನ ಸಂಗ್ರಹಣೆ ಮೂಲಗಳಾದ ಓ.ಎಸ್.ಟಿ ಟ್ಯಾಂಕ್, ಸಣ್ಣ ನೀರಿನ ಟ್ಯಾಂಕ್ ಸೇರಿದಂತೆ ಇತರ ಕುಡಿಯುವ ನೀರು ಸಂಗ್ರಹಗಳು ಕಡ್ಡಾಯವಾಗಿ ಕ್ಲೀನ್ ಆಗಬೇಕು. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕಾಗಿದ್ದು, ಈ ನಿಟ್ಟಿನಲ್ಲಿ ಪೈಪ್ಲೈನ್ ಅವಶ್ಯಕತೆ ಇದ್ದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ವಾಂತಿ ಬೇಧಿ ಪ್ರಕರಣದ ಹಿನ್ನೆಲೆ ತಾಪಂ ಇಓಗಳು, ತಹಸೀಲ್ದಾರರು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಪ್ರತಿದಿನ ಜಂಟಿ ಸಭೆ ನಡೆಸಿ, ಜಿಪಂ ಹಾಗೂ ಡಿ.ಹೆಚ್.ಓ ಕಚೇರಿಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.

ಪ್ರಸ್ತುತ ಮಳೆಗಾಲ ಆರಂಭಗೊಂಡಿದ್ದು, ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿ, ಬಯಲು ಶೌಚಕ್ಕೆ ಹೋಗದಂತೆ ಗ್ರಾಮಸ್ಥರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿ.ಪಂ ಯೋಜನಾ ನಿರ್ದೇಶಕರಾದ ಟಿ.ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಮಳಗಿ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ನಂದಕುಮಾರ್ ಸೇರಿದಂತೆ ವಿವಿಧ ತಾಲೂಕುಗಳ ಇಓಗಳು, ತಾಲೂಕು ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave A Reply

Your email address will not be published.