deshadoothanews

ಕೊಪ್ಪಳ ಜಿಲ್ಲೆಯ 153 ಗ್ರಾಪಂಗಳಿಗೆ ಮೀಸಲು ನಿಗದಿ ಸಂಬಂಧ ಸದಸ್ಯರ ಸಭೆ

ಡಿ ಡಿ ನ್ಯೂಸ್. ಕೊಪ್ಪಳ

0

ಡಿ ಡಿ ನ್ಯೂಸ್.

ಕೊಪ್ಪಳ  (ಕರ್ನಾಟಕ ವಾರ್ತೆ): ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ, 1993ರ ಪ್ರಕರಣ 44(2)ರನ್ವಯ ಗ್ರಾಮ ಪಂಚಾಯಿತಿಗಳಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ವರ್ಗವಾರು ಸಂಖ್ಯೆಯನ್ನು ನಿಗದಿಪಡಿಸಿರುತ್ತದೆ.

 

ಈ ಆದೇಶದನ್ವಯ ಕೊಪ್ಪಳ ಜಿಲ್ಲೆಯ 07 ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ 153 ಗ್ರಾಮ ಪಂಚಾಯತಿಗಳಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿಯನ್ನು ಗ್ರಾಮ ಪಂಚಾಯತಿ ಸದಸ್ಯರ ಸಮ್ಮುಖದಲ್ಲಿ ನಿಗದಿಪಡಿಸಬೇಕಾಗಿದೆ. ಈ ಸಂಬಂಧ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರ ಸಭೆ ನಡೆಸಲು ದಿನಾಂಕ ಹಾಗೂ ಸ್ಥಳ ನಿಗದಿಪಡಿಸಲಾಗಿದೆ.

 

ಕುಷ್ಟಗಿ ತಾಲೂಕಿನ 36 ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ಸಭೆಯು ಜೂನ್ 16ರಂದು ಬೆಳಗ್ಗೆ 10.30ರಿಂದ ಕುಷ್ಟಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಡಿಟೋರಿಯಂ ಹಾಲ್‌ನಲ್ಲಿ ನಡೆಯಲಿದೆ. ಕನಕಗಿರಿ ತಾಲೂಕಿನ 11 ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ಸಭೆಯು ಜೂನ್ 17ರಂದು ಬೆಳಗ್ಗೆ 10.30ರಿಂದ ಕನಕಗಿರಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರಟಗಿ ತಾಲೂಕಿನ 13 ಗ್ರಾಮ ಪಂಚಾಯತಗಳಿಗೆ ಸಂಬಂಧಿಸಿದ ಸಭೆಯು ಜೂನ್ 17ರಂದು ಮಧ್ಯಾಹ್ನ 3 ಗಂಟೆಯಿಂದ ಕಾರಟಗಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಮುದಾಯ ಭವನದಲ್ಲಿ ನಡೆಯಲಿದೆ. ಗಂಗಾವತಿ ತಾಲೂಕಿನ 18 ಗ್ರಾಮ ಪಂಚಾಯತಗಳಿಗೆ ಸಂಬಂಧಿಸಿದ ಸಭೆಯು ಜೂನ್ 19ರಂದು ಬೆಳಗ್ಗೆ 10.30ರಿಂದ ಗಂಗಾವತಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಮುದಾಯ ಭವನದಲ್ಲಿ ನಡೆಯಲಿದೆ. ಯಲಬುರ್ಗಾ ತಾಲೂಕಿನ 22 ಗ್ರಾಮ ಪಂಚಾಯತಗಳಿಗೆ ಸಂಬಂಧಿಸಿದ ಸಭೆಯು ಜೂನ್ 20ರಂದು ಬೆಳಗ್ಗೆ 10.30 ರಿಂದ ಯಲಬುರ್ಗಾದ ಬುದ್ಧ, ಬಸವ, ಅಂಬೇಡ್ಕರ ಸಮುದಾಯ ಭವನದಲ್ಲಿ ನಡೆಯಲಿದೆ. ಕುಕನೂರ ತಾಲೂಕಿನ 15 ಗ್ರಾಮ ಪಂಚಾಯತಗಳಿಗೆ ಸಂಬಂಧಿಸಿದ ಸಭೆಯು ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಜೂನ್ 20ರಂದು ಮಧ್ಯಾಹ್ನ 3 ಗಂಟೆಯಿಂದ ನಡೆಯಲಿದೆ. ಕೊಪ್ಪಳ ತಾಲೂಕಿನ 38 ಗ್ರಾಮ ಪಂಚಾಯತ್‌ಗಳಿಗೆ ಸಂಬಂಧಿಸಿದ ಸಭೆಯು ಜೂನ್ 21ರಂದು ಬೆಳಗ್ಗೆ 10.30ರಿಂದ ಕೊಪ್ಪಳದ ಬಹದ್ದೂರಬಂಡಿ ರಸ್ತೆಯಲ್ಲಿನ ಮಹಾವೀರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

 

ಈ ಪ್ರಯುಕ್ತ ಸಂಬಂಧಪಟ್ಟ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು ಸದರಿ ಆಯಾ ದಿನಾಂಕಗಳಂದು ಆಯಾ ತಾಲ್ಲೂಕಾ ಕೇಂದ್ರಗಳಲ್ಲಿ ನಿಗದಿಪಡಿಸಿದ ಸ್ಥಳಗಳಲ್ಲಿ ಉಪಸ್ಥಿತರಿರಲು ಕೋರಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave A Reply

Your email address will not be published.