deshadoothanews

ಕುಷ್ಟಗಿ ತಾಲೂಕು: ಮೀಸಲು ನಿಗದಿ ಸಂಬಂಧ ಜೂನ್ 16ರಂದು ಸಭೆ

ಡಿ ಡಿ ನ್ಯೂಸ್. ಕೊಪ್ಪಳ

0

ಡಿ ಡಿ ನ್ಯೂಸ್.
ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕು ವ್ಯಾಪ್ತಿಯಲ್ಲಿ ಬರುವ 36 ಗ್ರಾಮ ಪಂಚಾಯತಿಗಳಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿಯನ್ನು ಗ್ರಾಮ ಪಂಚಾಯತಿ ಸದಸ್ಯರ ಸಮ್ಮುಖದಲ್ಲಿ ನಿಗದಿಪಡಿಸಬೇಕಾಗಿದೆ. ಆದ್ದರಿಂದ ಕುಷ್ಟಗಿ ತಾಲೂಕಿನ 36 ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ಸಭೆಯು ಜೂನ್ 16ರಂದು ಬೆಳಗ್ಗೆ 10.30ರಿಂದ ಕುಷ್ಟಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಡಿಟೋರಿಯಂ ಹಾಲ್‌ನಲ್ಲಿ ನಡೆಯಲಿದೆ. ಆದ್ದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು ಉಪಸ್ಥಿತರಿರಲು ಕೋರಲಾಗಿದೆ.

ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ, 1993ರ ಪ್ರಕರಣ 44(2)ರನ್ವಯ ಗ್ರಾಮ ಪಂಚಾಯಿತಿಗಳಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ವರ್ಗವಾರು ಸಂಖ್ಯೆಯನ್ನು ನಿಗದಿಪಡಿಸಿರುತ್ತದೆ. ಈ ಆದೇಶದನ್ವಯ ಈ ಪ್ರಕ್ರಿಯೆಯನ್ನ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave A Reply

Your email address will not be published.