deshadoothanews

ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ

ಡಿ ಡಿ ನ್ಯೂಸ್. ಕೊಪ್ಪಳ

0

ಡಿ ಡಿ ನ್ಯೂಸ್.
ಕೊಪ್ಪಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಜೂನ್ 13ರಂದು ನಡೆಯಿತು.

ಜಿಲ್ಲಾಡಳಿತದ ಭವನದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಮಗು ಜನಿಸಿದ 24 ಗಂಟೆಯೊಳಗೆ ಹಾಕಬೇಕಾದ ಕಡ್ಡಾಯ ಲಸಿಕೆಗಳು, ಮಗುವಿನ ಬೆಳವಣಿಗೆಯ ವಿವಿಧ ಹಂತಗಳಲ್ಲಿ ಹಾಕಬೇಕಾದ ಲಸಿಕೆಗಳು, ಲಸಿಕೆಯಿಂದ ಮಗುವಿಗೆ ಆಗುವ ಆರೋಗ್ಯ ಪ್ರಯೋಜನೆಗಳು, ಲಸಿಕೆ ಹಾಕಿಸದೇ ಇರುವುದರಿಂದ ಆಗುವ ತೊಂದರೆಗಳು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಪ್ರತಿಯೊಬ್ಬ ತಾಯಂದಿರಿಗೆ ಗೊತ್ತಿರಬೇಕು. ಮಗುವಿನ ಆರೋಗ್ಯದ ಬಗ್ಗೆ ಅತಿ ಹೆಚ್ಚಿನ ಕಾಳಜಿ ವಹಿಸಲು ಮತ್ತು ನಿಗದಿತ ಸಮಯಕ್ಕೆ ಲಸಿಕೆ ಹಾಕುವಂತೆ ಆಯಾ ಮಗುವಿನ ಪಾಲಕರಿಗೆ ಸ್ಥಳೀಯವಾಗಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಸೂಕ್ತ ಸಮಯದಲ್ಲಿ ತಿಳಿವಳಿಕೆ ಮೂಡಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಅರ್ಹರಿರುವ ಪ್ರತಿಯೊಬ್ಬ ಮಗುವಿಗೂ ಲಸಿಕೆ ಹಾಕಿಸಲು ಕ್ರಮಕೈಗೊಳ್ಳಬೇಕು. ಈ ಕಾರ್ಯಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯವರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಮಳಗಿ, ಬಳ್ಳಾರಿ ಎಸ್.ಎಂ.ಓ ಡಾ.ಶ್ರೀಧರ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಪ್ರಾಕಾಶ ಬಿ., ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರವೀಂದ್ರನಾಥ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ವೆಂಕಟೇಶ, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಶಶೀಧರ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ರಮೇಶ ಮೂಲಿಮನಿ ಸೇರಿದಂತೆ ಎಲ್ಲ ತಾಲೂಕುಗಳ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 

Leave A Reply

Your email address will not be published.