deshadoothanews

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ

0

ಡಿ ಡಿ ನ್ಯೂಸ್. ಕೊಪ್ಪಳ :

ಸಮಾಜ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಎಸ್.ಎಚ್.ಪಿ (ಸ್ಟೇಟ್ ಹಾಸ್ಟಲ್ ಪೊರ್ಟಲ್) ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವೆಬ್‌ಸೈಟ್ www.sw.kar.nic.in ನಲ್ಲಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ವೆಬ್‌ಸೈಟ್ www.tw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಮ್ಯಾನುವಲ್‌ನ ಅರ್ಜಿ ಅಥವಾ ಕೋರಿಕೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ತಾಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು, ಗಂಗಾವತಿ, ಕುಷ್ಟಗಿ ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.