deshadoothanews

ಮೌಲಾನಾ ಆಜಾದ್ ಮಾದರಿ ಶಾಲೆ: ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ನಗರದಲ್ಲಿರುವ ಅಲ್ಪಸಂಖ್ಯಾತರ ಸರಕಾರಿ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸರಕಾರಿ ಮೌಲಾನಾ ಆಜಾದ್ ಮಾದರಿ ಶಾಲೆ ಸರ್ದಾರಗಲ್ಲಿ, ಕೊಪ್ಪಳ ಈ ಶಾಲೆಯಲ್ಲಿ ತೃತೀಯ ಭಾಷೆ ಹಿಂದಿ ವಿಷಯದ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ತಲಾ ಒಂದು ಹುದ್ದೆ ಖಾಲಿ ಇದ್ದು, ಹಿಂದಿ ವಿಷಯದ ಅತಿಥಿ ಶಿಕ್ಷಕರ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಬಿ.ಎ, ಬಿ.ಇಡಿ (ಹಿಂದಿ ವಿಷಯದಲ್ಲಿ) ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಅತಿಥಿ ಶಿಕ್ಷಕರ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಬಿ.ಎ ಅಥವಾ ಬಿ.ಕಾಂ ಅಥವಾ ಬಿ.ಎಸ್.ಸಿ ಮತ್ತು ಬಿ.ಪಿ.ಇಡಿ ಆಗಿರಬೇಕು.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಜೂನ್ 28ರೊಳಗಾಗಿ ಸರಕಾರಿ ಮೌಲಾನಾ ಆಜಾದ್ ಮಾದರಿ ಶಾಲೆ ಸರ್ದಾರಗಲ್ಲಿ, ಕೊಪ್ಪಳ ಇಲ್ಲಿಗೆ ಖುದ್ದಾಗಿ ಬಂದು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9900617290, 9980229105ಗೆ ಸಂಪರ್ಕಿಸಬಹುದಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave A Reply

Your email address will not be published.