deshadoothanews

ಜೂನ್ 23ರಂದು ಕೊಪ್ಪಳದಲ್ಲಿ ಮಿನಿ ಉದ್ಯೋಗ ಮೇಳ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮಿನಿ ಉದ್ಯೋಗ ಮೇಳವನ್ನು ಜೂನ್ 23ರಂದು ಬೆಳಿಗ್ಗೆ 10.30 ರಿಂದ 2.30 ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಈ ಮಿನಿ ಉದ್ಯೋಗ ಮೇಳದಲ್ಲಿ ಶ್ರೀರಾಮ ಲೈಫ್ ಇನ್‌ಸೂರೆನ್ಸ್ ಹುಬ್ಬಳ್ಳಿ, ವಿಸ್ಟ್ರಾನ್, ನರಸಾಪುರ ಇಂಡಸ್ಟ್ರೀಯಲ್ ಏರಿಯಾ, ಕೋಲಾರ, ದೇಶಪಾಂಡೆ ಫೌಂಡೇಶನ್ ಹುಬ್ಬಳ್ಳಿ, ಕೆಪಿಎಫ್ ಕೊಪ್ಪಳ ಇವರ ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ (ಆಲ್ ಟ್ರೇಡ್) ಹಾಗೂ ಡಿಪ್ಲೋಮಾ, ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ, ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಈ ಮಿನಿ ಉದ್ಯೋಗ ಮೇಳದಲ್ಲಿ ಆಸಕ್ತಿಯುಳ್ಳ 18 ರಿಂದ 32 ವರ್ಷದ ವರೆಗಿನ ಯುವಕ ಮತ್ತು ಯುವತಿಯರು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ(ರೆಜೂಮ್) ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಅಥವಾ ದೂ.ಸಂ: 08539-220859, ಮೊ.ಸಂ: 9916825943, 7975653554, 8105693234 ಹಾಗೂ 6361143422ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave A Reply

Your email address will not be published.