deshadoothanews

ಕೈಮಗ್ಗ & ಜವಳಿ ನೇಕಾರರಿಗೆ ವಿಶೇಷ ಪ್ಯಾಕೇಜ್ ಯೋಜನೆ: ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ

0

ಡಿ ಡಿ ನ್ಯೂಸ್. ಕೊಪ್ಪಳ : ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2023-24ನೇ ಸಾಲಿಗಾಗಿ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯ ಅರ್ಜಿ ಆಹ್ವಾನಿಸಲಾಗಿದೆ.

ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯ ಸಾಮಾನ್ಯ, ಎಸ್ಸಿ-ಎಸ್ಟಿ ಯೊಜನೆಯಡಿ ವಿದ್ಯುತ್ ಮಗ್ಗ ಮತ್ತು ಸಲಕರಣೆ, 2 ವಿದ್ಯುತ್ ಮಗ್ಗ ಹಾಗೂ ಎಲೆಕ್ಟ್ರಾನಿಕ್ ಜಕಾರ್ಡ್ ಯೋಜನೆಗಳಡಿ ಗುರಿ ನಿಗದಿಪಡಿಸಲಾಗಿದ್ದು, ವಿದ್ಯುತ್ ಮಗ್ಗ ಚಟುವಟಿಕೆ ಕೈಗೊಳ್ಳುವ ಉದ್ದೇವಿರುವ ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಯೋಜನೆಯ ಘಟಕದ ವೆಚ್ಚ ರೂ. 3.50,000 ಆಗಿದ್ದು, ಈ ಮೊತ್ತವನ್ನು ಹಣಕಾಸು ಸಂಸ್ಥೆಗಳಿಂದ ಬ್ಯಾಂಕ್ ನಿಂದ ಸಾಲ ಪಡೆದು ಯಂತ್ರೋಪಕರಣಗಳನ್ನು ಅಳವಡಿಸಿ ಉತ್ಪಾದನೆ ಪ್ರಾರಂಭಿಸಿದ ನಂತರ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ವರ್ಗದವರಿಗೆ ಶೇ.50% ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇ.90% ರಷ್ಟು ಸಹಾಯಧನವನ್ನು ಸಂಬಂಧಪಟ್ಟ ಸಾಲ ನೀಡಿದ ಬ್ಯಾಂಕುಗಳಿಗೆ ಆರ್.ಟಿ.ಜಿ.ಎಸ್ ಮೂಲಕ ಜಮಾ ಮಾಡಲಾಗುವುದು.ವಿದ್ಯುತ್ ಮಗ್ಗ ಚಟುವಟಿಕೆ ನಡೆಸಲು ಆಸಕ್ತಿವುಳ್ಳ ಅರ್ಹ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು. ಕೊಪ್ಪಳ ಜಿಲ್ಲೆಯ ಪರಿಶಿಷ್ಟ ಜಾತಿಯವರಿಗೆ ಒಂದು ಗುರಿಯನ್ನು ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆಯ ದೂ,ಸಂ 08539-295469ಗೆ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.