deshadoothanews

ಎಸ್ಸೆಸ್ಸೆಲ್ಸಿ ಫಲಿತಾಂಶ: ತಳಕಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉತ್ತಮ ಸಾಧನೆ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕುಕನೂರು ಕೊಪ್ಪಳ: ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯು 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ 100 ರಷ್ಟು ಆಗಿರುತ್ತದೆ ಎಂದು ವಸತಿ ಶಾಲೆ ಪ್ರಾಂಶುಪಾಲರು ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ವಸತಿ ಶಾಲೆಯ 57 ವಿದ್ಯಾರ್ಥಿಗಳು ವಿದ್ಯಾರ್ಥಿಗಳಲ್ಲಿ 28 ಡಿಸ್ಟಿಂಕ್ಷನ್ ಹಾಗೂ 29 ವಿದ್ಯಾರ್ಥಿಗಳು ಪ್ರಥಮ ದರ್ಜೆ ಸ್ಥಾನ ಪಡೆಯುವ ಮೂಲಕ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಪ್ರಥಮ ಸ್ಥಾನ ವೆಂಕಟೇಶ ಶೇ 97.28, ದ್ವಿತೀಯ ಸ್ಥಾನ ಉಮ ತಬಕಿ ಶೇ 96.32 ಮತ್ತು ತೃತೀಯ ಸ್ಥಾನ ಶಾಹೀದ ಹೆಚ್ ಗೌಡರ್ ಶೇ 94.72 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು, ನಿಲಯಪಾಲಕರು ಮತ್ತು ಸರ್ವ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 

Leave A Reply

Your email address will not be published.