deshadoothanews

ಜೂನ್ 23ರಂದು ಕಾರಟಗಿ ತಾಪಂ ಸಾಮಾನ್ಯ ಸಭೆ

ಡಿ ಡಿ ನ್ಯೂಸ್. ಕೊಪ್ಪಳ

0

ಡಿ ಡಿ ನ್ಯೂಸ್. ಕೊಪ್ಪಳ : ಕಾರಟಗಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯನ್ನು ಜೂನ್ 23ರಂದು ಬೆಳಿಗ್ಗೆ 11 ಗಂಟೆಗೆ ಕಾರಟಗಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಕಾರಟಗಿ ತಾಲೂಕ ಪಂಚಾಯತ್ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಗಳಾದ ಅಮಿನ್‌ಸಾಬ್ ಅವರು ವಹಿಸುವರು. ಕಾರಟಗಿ ತಾಲೂಕು ಮಟ್ಟದ ಎಲ್ಲಾ ಅನುಷ್ಠಾನಾಧಿಕಾರಿಗಳು ಪ್ರಗತಿ ವರದಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.