deshadoothanews

ಜೂನ್ 27ರಂದು ಕೆಂಪೇಗೌಡ ಜಯಂತಿ: ಭಾಗವಹಿಸಲು ಸೂಚನೆ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ : ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿಯನ್ನು ಜೂನ್ 27ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಯಂತಿ ಆಚರಣೆ ಕಾರ್ಯಕ್ರಮ ದಿನದಂದು ಎಲ್ಲಾ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಸರಿಯಾದ ಸಮಯಕ್ಕೆ ಭಾಗವಹಿಸಬೇಕು. ಎಲ್ಲಾ ಇಲಾಖೆಗಳು ತಮ್ಮ ಕಾರ್ಯಾಲಯದಲ್ಲಿ ಹಾಗೂ ತಮ್ಮ ಅಧೀನ ಕಾರ್ಯಾಲಯಗಳಲ್ಲಿಯೂ ಜಯಂತಿಯನ್ನು ಆಚರಿಸುವಂತೆ ಕೊಪ್ಪಳ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave A Reply

Your email address will not be published.