deshadoothanews

ಜಿಲ್ಲಾ ಮಟ್ಟದ ಕೆಡಿಪಿ ಸಭೆಯ ಪೂರ್ವಭಾವಿ ಸಭೆಯಲ್ಲಿ ತಾಲೂಕು ನೋಡಲ್ ಅಧಿಕಾರಿಗಳ ಹೇಳಿಕೆ

ಡಿ ಡಿ ನ್ಯೂಸ್. ಕೊಪ್ಪಳ

0

ಡಿ ಡಿ ನ್ಯೂಸ್. ಯಲಬುರ್ಗಾ :

ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನೋಡಲ್ ಅಧಿಕಾರಿಗಳು ಯಲಬುರ್ಗಾ ಹಾಗೂ ಜಿ.ಪಂ ಮುಖ್ಯ ಯೋಜನಾಧಿಕಾರಿಗಳಾದ ಮಾನ್ಯಶ್ರೀ ಮಂಜುನಾಥ ಡಿ ಸರ್, ಹಾಗೂ ನೋಡಲ್ ಅಧಿಕಾರಿಗಳು ಕುಕನೂರ ಮಾನ್ಯ ಜಿ.ಪಂ ಮುಖ್ಯ ಲೆಕ್ಕಾಧಿಕಾರಿಗಳಾದ ಮಾನ್ಯ ಅಮಿನ್ ಅತ್ತಾರ್ ಸರ್ ಅಧ್ಯಕ್ಷತೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯತ್ ನ ಕೆಡಿಪಿ ಸಭೆಯ ಪೂರ್ವಭಾವಿ ಸಭೆಯನ್ನು ಜರುಗಿಸಿ ವಿವಿಧ ಇಲಾಖೆಗಳ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ವಿವಿಧ ಯೋಜನೆಗಳು/ ಕಾರ್ಯಕ್ರಮಗಳು ಕುರಿತಂತೆ ಇಲಾಖಾವಾರು ಪ್ರಗತಿ ಪರಿಶೀಲನೆ ಸಭೆ ಇಲಾಖಾ ಮುಖ್ಯಸ್ಥರೊಡನೆ ಸದರಿ ಆರ್ಥಿಕ ವರ್ಷದಲ್ಲಿ ಕೈಗೊಳ್ಳಬಹುದಾದ ಚಟುವಟಿಕೆಗಳ ಕುರಿತು ಚರ್ಚಿಸಿದರು.

ಸಭೆಯಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿಗಳಾದ ಮಾನ್ಯಶ್ರೀ ಮಂಜುನಾಥ ಡಿ ಮಾತನಾಡಿ , ಯಲಬುರ್ಗಾ ಹಾಗೂ ಕುಕನೂರ ತಾಲೂಕಿನ ಗ್ರಾಮಗಳಲ್ಲಿ ಒಟ್ಟು 105 ವಾಂತಿ ಭೇದಿ ಪ್ರಕರಣಗಳು ಕಂಡುಬಂದಿದ್ದು, ಅದರಲ್ಲಿ ಸಾಲಭಾವಿ 35, ಗಾವರಾಳ 55, ಬೈರನಾಯಕನಹಳ್ಳಿ 25 ಪ್ರಕರಣಗಳು ಕಂಡುಬಂದಿವೆ. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಶಿಭಿರಗಳನ್ನು ಏರ್ಪಡಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಗುಣಮುಖರಾಗಿದ್ದಾರೆ. ಮುಂದೆ ವಾಂತಿ ಭೇದಿ ಪ್ರಕರಣಗಳು ಸಂಭವಿಸದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು. ಆರೋಗ್ಯ ಸಮಸ್ಯೆಗಳು ಕಂಡು ಬಂದಲ್ಲಿ ಸಂಬಂಧಿಸಿದ ಗ್ರಾಮ ಪಂಚಾಯತಿ ಪಿಡಿಒ, ಕಂದಾಯ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಲು ಸೂಚಿಸಿದರು.

ಯಲಬುರ್ಗಾ ತಾಲೂಕಿನಲ್ಲಿ ಒಟ್ಟು 105 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಅದರಲ್ಲಿ 88 ಘಟಕಗಳು ಕಾರ್ಯನಿರ್ವಹಿಸುತ್ತಿವೆ. 17 ದುರಸ್ಥಿಯಲ್ಲಿವೆ. ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಘಟಕಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ಈ ಕುರಿತು ಎರಡು ದಿನಗಳಲ್ಲಿ ಸಮಗ್ರ ಮಾಹಿತಿಯನ್ನು ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿ.ಪಂ ಮುಖ್ಯ ಲೆಕ್ಕಾಧಿಕಾರಿಗಳಾದ ಮಾನ್ಯ ಅಮಿನ್ ಅತ್ತಾರ್ ಸರ್ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2023-24 ನೇ ಸಾಲಿನಲ್ಲಿ 7 ಲಕ್ಷ ಮಾನವ ದಿನಗಳ ಗುರಿ ನೀಡಲಾಗಿದ್ದು, ಇದರಲ್ಲಿ ಈಗಾಗಲೇ 3,61,727 ಮಾನವ ದಿನಗಳ ಸೃಜಿಸಿ 118.25 ರಷ್ಟು ಗುರಿ ಸಾಧಿಸಿದೆ. ಅಷ್ಟೆ ಅಲ್ಲದೇ ನರೇಗಾದಡಿ ಮಹಿಳೆಯರ ಭಾಗವಹಿಸುವಿಕೆ ಶೇಕಡಾ 50.82 ರಷ್ಟಿದೆ. ತಾಲೂಕಿನ 22 ಗ್ರಾಮ ಪಂಚಾಯತಿಗಳಲ್ಲಿ ಪ್ರತಿದಿನ 8 ರಿಂದ 10 ಸಾವಿರದಷ್ಟು ಜನರಿಗೆ ಕೆಲಸ ಕೊಡಲಾಗುತ್ತಿದೆ. ಆದರೆ, ಮಾನವ ದಿನಗಳ ಸೃಜನೆಯಲ್ಲಿ ಕಡಿಮೆ ಪ್ರಗತಿ ಸಾಧಿಸಿದ ವಂಕಲಕುಂಟಾ ಹಾಗೂ ಆದಾರ್ ಸಿಡಿಂಗ್ ನಲ್ಲಿ ವಜ್ರಬಂಡಿ ಹಾಗೂ ಇತರೆ ಗ್ರಾಮ ಪಂಚಾಯತಿಗಳು ಪ್ರಗತಿ ಕಡಿಮೆ ಇದ್ದು ಎರಡು ದಿನಗಳ ಒಳಗಾಗಿ ಸಾಧಿಸಲು ತಿಳಿಸಿದರು.

ತಾಲೂಕಿನಲ್ಲಿ ವಿವಿಧ ಲೆಕ್ಕ ಶೀರ್ಷಿಕೆಗಳ ಅಡಿಯಲ್ಲಿ ಹಾಗೂ ವಿವಿಧ ಯೋಜನೆಗಳ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಗನವಾಡಿಗಳ ಮಾಹಿತಿಯನ್ನು ನೀಡುವಂತೆ ಸೂಚಿಸಲಾಯಿತು. ಅಂಗನವಾಡಿ ಕೇಂದ್ರಗಳ ಸುತ್ತ ಅನೈರ್ಮಲ್ಯದ ಸ್ಥಿತಿ ಇರುವ ಕೇಂದ್ರಗಳ ಪಟ್ಟಿಯನ್ನು ನೀಡುವಂತೆ ತಿಳಿಸಿದರು.ಪಿಎಂ ಕಿಸಾನ್ ಯೋಜನೆಯ ಅಡಿಯಲ್ಲಿ ಫಲಾನುಭವಿಗಳ ಮಾಹಿತಿ,ರೈತರ ಈ ಕೆ ವೈಸಿಯನ್ನು ತುರ್ತಾಗಿ ಪ್ರಗತಿ ಸಾಧಿಸಬೇಕೆಂದರು. ಈ ಬಾರಿ 86.8 mm ಮಳೆಯಾಗಿದೆ ಎಂದರು.
ಈ ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂತೋಷ ಪಾಟೀಲ್ ಬಿರಾದಾರ, ರಾಮಣ್ಣ ದೊಡ್ಡಮನಿ, ತಹಶೀಲ್ದಾರರಾದ ವಿಠಲ್ ಚೌಗಲೆ, ತಾ.ಪಂ ಸಹಾಯಕ ನಿರ್ದೇಶಕರು, ತಾ.ಪಂ ಎಲ್ಲ ಸಂಕಲನಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

Leave A Reply

Your email address will not be published.