deshadoothanews

*ಸಕಾಲ ಅರ್ಜಿಗಳ ವಿಲೇಗೆ ವಿಳಂಬವಾಗದಿರಲಿ: ಎಂ.ಸುಂದರೇಶ ಬಾಬು*

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ :
 ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011ರ ಸಮರ್ಪಕ ಅನುಷ್ಠಾನ ಮತ್ತು ಐಪಿಜಿಆರ್‌ಎಸ್ ಪ್ರಗತಿ ಕುರಿತಂತೆ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಜೂನ್ 26ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.

 

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಸಕಾಲ ಅರ್ಜಿಗಳು ಕಾಲಮಿತಿಯೊಳಗೆ ವಿಲೆಯಾಗಲು ಒತ್ತು ಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಸಕಾಲ ಸೇವೆಗಳ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡಬೇಕು. ನಾಗರಿಕರಿಗೆ ನಿಗದಿತ ಕಾಲಾವಧಿಯೊಳಗೆ ಖಾತರಿ ಸೇವೆ ನೀಡುವ ನಿಟ್ಟಿನಲ್ಲಿ ಈ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಹ ಅಧಿಕಾರಿಗಳು ಹೆಚ್ಚಿನ ಒತ್ತು ಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

 

ಐಪಿಜಿಆರ್‌ಎಸ್ ‌ಹಾಗೂ ಸಕಾಲ ಯೋಜನೆಯಡಿ ಸ್ವೀಕೃತವಾದ ಅರ್ಜಿಗಳಿಗೆ ಸಕಾಲದಲ್ಲಿ ಸೇವೆ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಆಯಾ ಇಲಾಖೆಗಳಲ್ಲಿ ಬಾಕಿ ಉಳಿದಿದ್ದಲ್ಲಿ ಅಂತಹ ಅರ್ಜಿಗಳನ್ನು ತ್ವರಿತವಾಗಿ ವಿಲೇ ಮಾಡಬೇಕು. ಸಕಾಲ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಯು ಅನಗತ್ಯ ವಿಳಂಬ ಮಾಡುವುದು ಕಂಡು ಬಂದಲ್ಲಿ ಶಿಸ್ತು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.

 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ, ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್ ರುದ್ರೇಶಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಎಲ್.ಬಿ.ನಾಲವರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Leave A Reply

Your email address will not be published.