deshadoothanews

ಅನಾರೋಗ್ಯದಿಂದ ಸಾವು ಪ್ರಕರಣ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ :
 ಅನಾರೋಗ್ಯದಿಂದ ಜೂನ್ 29ರಂದು ಮೃತಪಟ್ಟ, ಕನಕಗಿರಿ ತಾಲೂಕಿನ ಮುಸಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹುಲಸನಹಟ್ಟಿ ಗ್ರಾಮದ ಸುನೀಲ್‌ಕುಮಾರ ಕಂದಕೂರು ಅವರ ನಿವಾಸಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಜೂನ್ 30ರಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಮೃತನು ಚಿಕಿತ್ಸೆಗಾಗಿ ದಾಖಲಾದ ಸಂದರ್ಭದಲ್ಲಿ ನೀಡಿದ ಚಿಕಿತ್ಸೆಯ ಕುರಿತು ಸಿಇಓ ಅವರು ಇದೆ ವೇಳೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು. ಗ್ರಾಮಸ್ಥರೊಂದಿಗೆ ಸಹ ಸಿಇಓ ಅವರು ಚರ್ಚಿಸಿದರು.
ಹುಲಸನಹಟ್ಟಿ ಗ್ರಾಮದಲ್ಲಿ ವಾಂಧಿ-ಬೇಧಿ ಪ್ರಕರಣಗಳು ಕಂಡುಬಾರದ ಹಾಗೆ ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದ ಕುಡಿಯುವ ನೀರಿನ ಮೂಲಗಳನ್ನು ಪರಿಶೀಲಿಸಬೇಕು. ಕುಡಿಯುವ ನೀರಿನ ಪೈಪ್‌ಲೈನ್‌ಗಳ ಪರಿಶೀಲನೆ, ಚರಂಡಿಗಳ ಸ್ವಚ್ಛತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕನಕಗಿರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಕಂದಕೂರು, ತಾಲೂಕು ಆರೋಗ್ಯಾಧಿಕಾರಿಗಳಾದ ಶರಣಪ್ಪ ಚಕ್ಕೊಟಿ, ಮುಸಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಸಹನಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

*ಚಿಕ್ಕಬೊಮ್ಮನಾಳ ಅಂಗನವಾಡಿ ಕೇಂದ್ರಕ್ಕೆ ಸಿಇಓ ಭೇಟಿ:*
ಹುಲಸನಹಟ್ಟಿಗೆ ತೆರಳುವ ಮಾರ್ಗದ ಮಧ್ಯೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಕೊಪ್ಪಳ ತಾಲೂಕಿನ ಚಿಕ್ಕಬೊಮ್ಮನಾಳ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಸಹ ಭೇಟಿ ಮಾಡಿದರು. ಈ ವೇಳೆ ಅಂಗನವಾಡಿ ಕೇಂದ್ರದಲ್ಲಿನ ಅಡುಗೆ ಕೋಣೆ, ಆಹಾರ ಸಾಮಗ್ರಿಗಳ ದಾಸ್ತಾನು ವೀಕ್ಷಣೆ ನಡೆಸಿದರು. ಅಂಗನವಾಡಿ ಕೇಂದ್ರದಲ್ಲಿನ ಮಕ್ಕಳು ಹಾಗೂ ಬಾಣಂತಿಯರಿಗೆ ನೀಡುವ ಪೌಷ್ಠಿಕ ಆಹಾರದ ವಿವರ, ಹಾಜರಾತಿ ವಿವರ ಹಾಗೂ ಇತರ ದಾಖಲಾತಿಗಳನ್ನು ಪರಿಶೀಲಿಸಿದರು.
ಆಟ ಸೇರಿದಂತೆ ಮಕ್ಕಳ ಕಲಿಕಾ ಚಟುವಟಿಕೆಗಳಿಗೆ ಸಂಬಂಧಿಸಿದ ವ್ಯವಸ್ಥೆಯನ್ನು ಕಂಡು ಸಿಇಓ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಮೇಲ್ವಿಚಾರಕರು, ಸಹಾಯಕರು ಸೇರಿದಂತೆ ಮತ್ತಿತರರು ಇದ್ದರು.
Leave A Reply

Your email address will not be published.