deshadoothanews

ಟ್ರಾವೇಲ್ & ಟುರಿಸ್ಟ ಗೈಡ್ ತರಬೇತಿಗೆ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ :
ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ, ಇಲ್ಲಿ ನಡೆಯುವ 10 ದಿನಗಳ ಟ್ರಾವೇಲ್ & ಟುರಿಸ್ಟ ಗೈಡ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಗಾಗಿ 18 ರಿಂದ 45 ವರ್ಷದೊಳಗಿನ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರುವ ಯುವಕರು ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳ ಅರ್ಜಿಯನ್ನು ಜುಲೈ 15ರೊಳಗಾಗಿ ತಲಪುವಂತೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ, ಈ ವಿಳಾಸಕ್ಕೆ ಅಥವಾ ವಾಟ್ಸಪ್ ಮೂಲಕ ಸಲ್ಲಿಸಬಹುದು. ಸಲ್ಲಿಸಬೇಕು.
ತರಬೇತಿ ಅವಧಿಯಲ್ಲಿ ಊಟೋಪಚಾರ ಹಾಗೂ ವಸತಿ ಸಂಪೂರ್ಣ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ವಿಸ್ತರಣಾ ಕೇಂದ್ರ, ಹಸನಮಾಳ, ದಾಂಡೇಲಿ-581325, ದೂ.ಸಂಖ್ಯೆ: 08284-298547, 9632149217, 9449782425 ಗೆ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Leave A Reply

Your email address will not be published.