deshadoothanews

ಗ್ರಾಹಕರ ಸಂರಕ್ಷಣಾ ಕಾಯಿದೆ: ಜುಲೈ 2ರಂದು ಸಂವಾದ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ :
ಗ್ರಾಹಕರ ಸಂರಕ್ಷಣಾ ಕಾಯಿದೆ-2019ರ ಕುರಿತು ಗ್ರಾಹಕರಲ್ಲಿ ಅರಿವು ಮೂಡಿಸಲು ಕರ್ನಾಟಕ ರಾಜ್ಯ ಗ್ರಾಹಕರ ಆಯೋಗದ ರಿಜಿಸ್ಟಾçರ್ ಮತ್ತು ಆಡಳಿತಾಧಿಕಾರಿಯಾದ ವಿಜಯಕುಮಾರ ಅವರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮವು ಜುಲೈ 2ರ ಸಂಜೆ 6 ಗಂಟೆಯಿಂದ 6.30ರವರೆಗೆ ದೂರದರ್ಶನ ಚಂದನವಾಹಿನಿಯಲ್ಲಿ ಪ್ರಸಾರವಾಗಲಿದೆ. ಗ್ರಾಹಕರು, ಪಕ್ಷಕಾರರು, ವಕೀಲರು, ಸೇರಿದಂತೆ ಪ್ರತಿಯೊಬ್ಬರು ಈ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಗ್ರಾಹಕರ ಆಯೋಗ ಕೊಪ್ಪಳದ ಸಹಾಯಕ ರಿಜಿಸ್ಟ್ರಾರ್ ಮತ್ತು ಸಹಾಯಕ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave A Reply

Your email address will not be published.