deshadoothanews

ಕಾರಟಗಿ ತಾಲೂಕು ಕರಡು ಮತದಾರರ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಅವಕಾಶ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ :
 ರಾಜ್ಯ ಚುನಾವಣಾ ಆಯೋಗದ ನಿರ್ದೇಶನಗಳನುಸಾರ ಜಿಲ್ಲಾ ಮತ್ತು ತಾಲೂಕಾ ಪಂಚಾಯತಿ ಸಾರ್ವತ್ರಿಕ ಚುನಾವಣೆ ಸಂಬಂಧ ಕಾರಟಗಿ ತಾಲೂಕಿನ 3 ಜಿಲ್ಲಾ ಪಂಚಾಯತಿ ಹಾಗೂ 9 ತಾಲೂಕಾ ಪಂಚಾಯತಿ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಗ್ರಾ.ಪಂ., ತಾ.ಪಂ. ಹಾಗೂ ತಹಶೀಲ್ದಾರ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ.
ಈ ಕರಡು ಮತದಾರರ ಪಟ್ಟಿಗಳು, ಕ್ಷೇತ್ರವಾರು ಮತಗಟ್ಟೆವಾರು ಆಯಾ ಗ್ರಾಮ ಪಂಚಾಯತಿಗಳಲ್ಲಿ ಮತ್ತು ತಹಶೀಲ್ದಾರ ಕಚೇರಿಯಲ್ಲಿ ಪರಿಶೀಲಿಸಬಹುದು. ಮತದಾರರ ಹೆಸರು ತಾವು ವಾಸವಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ಇರದೇ ಬೇರೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ, ಆ ಬಗ್ಗೆ ಆಕ್ಷೇಪಣೆ ಸಲ್ಲಿಸಬಹುದು. ನಗರ ಪ್ರದೇಶದ ಮತದಾರರ ಹೆಸರನ್ನು ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವ ಹೆಸರುಗಳನ್ನು ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗಳಿಗೆ ತಯಾರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆಗಳನ್ನು ಜುಲೈ 04ರೊಳಗಾಗಿ ಕಾರಟಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿರುತ್ತದೆ.
ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲು ಜುಲೈ 07ಕೊನೆಯ ದಿನವಾಗಿದ್ದು, ಸಾರ್ವಜನಿಕರು ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳುವಂತೆ ಕಾರಟಗಿ ತಹಶೀಲ್ದಾರರಾದ ಎಂ.ಬಸವರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave A Reply

Your email address will not be published.