deshadoothanews

17ನೇ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮ ಜು.25ಕ್ಕೆ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ :
ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಾರ್ಯಾಲಯ ಕೊಪ್ಪಳ ಇವರ ಸಹಯೋಗದಲ್ಲಿ 17ನೇ ಸಾಂಖ್ಯಿಕ ದಿನಾಚರಣೆ ಹಾಗೂ ಭಾರತದ ಖ್ಯಾತ ಸಂಖ್ಯಾ ಶಾಸ್ತ್ರಜ್ಞರಾದ ಪ್ರೊ. ಪಿ.ಸಿ.ಮಹಾಲನೋಬಿಸ್ ರವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಜುಲೈ 25ರಂದು ಮಧ್ಯಾಹ್ನ 3ಗಂಟೆಗೆ ಜಿಲ್ಲಾ ಪಂಚಾಯತ್ ಜೆ. ಹೆಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ಮಂ ಪಾಂಡೆಯ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಜಿಪಂ ಉಪಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ, ಉಪ ವಿಭಾಗಾಧಿಕಾರಿಗಳಾದ ಮಹೇಶ ಮಾಲಗಿತ್ತಿ, ಜಿಪಂ ಮುಖ್ಯ ಯೋಜನಾಧಿಕಾರಿಗಳಾದ ಡಿ.ಮಂಜುನಾಥ, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್., ಜಿಪಂ ಯೋಜನಾ ನಿರ್ದೇಶಕರಾದ ಟಿ.ಕೃಷ್ಣಮೂರ್ತಿ, ಮುಖ್ಯ ಲೆಕ್ಕಾಧಿಕಾರಿಗಳಾದ ಅಮೀನ್‌ಸಾಬ್, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ ಟಿ.ಲಿಂಗರಾಜ, ಜಿಪಂ ಯೋಜನಾ ಅಂದಾಜು ಮತ್ತು ಮೌಲ್ಯ ಮಾಪನಾಧಿಕಾರಿಗಳಾದ ಕೆ.ಕುಮಲಯ್ಯ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ, ರೇಶ್ಮೆ ಇಲಾಖೆಯ ಉಪನಿರ್ದೇಶಕರಾದ ಸಿ.ಅಂಜನಾಮೂರ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷರಾದ ನಾಗರಾಜ ಆರ್ ಜುಮ್ಮನ್ನವರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಅವರು ಪಾಲ್ಗೊಳ್ಳುವರು.
ಕಾರ್ಯಕ್ರಮದ ಅಂಗವಾಗಿ ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಪ್ರಭುರಾಜ ನಾಯಕ ಅವರು ವಿಶೇಷ ಉಪನ್ಯಾಸ ನೀಡುವರು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave A Reply

Your email address will not be published.