deshadoothanews

ಗಣಕಯಂತ್ರ ಶಿಕ್ಷಣ ಪರೀಕ್ಷೆ: ಶಾಂತಿ ಪಾಲನೆಗಾಗಿ ನಿಷೇಧಾಜ್ಞೆ ಜಾರಿ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ :
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರಿಂದ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜುಲೈ 27ರಿಂದ ಆಗಸ್ಟ್ 04ರವರೆಗೆ ಜರುಗಲಿರುವ ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಆದೇಶ ಹೊರಡಿಸಿದ್ದಾರೆ.
ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ಕೊಪ್ಪಳ ಪರೀಕ್ಷಾ ಕೇಂದ್ರದಲ್ಲಿ ಗಣಕಯಂತ್ರ ಶಿಕ್ಷಣ (ಥಿಯರಿ ಮತ್ತು ಪ್ರಯೋಗಿಕ) ಪರೀಕ್ಷೆಗಳು ನಿಗದಿತ ದಿನಾಂಕದ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರದ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Leave A Reply

Your email address will not be published.