Deshadootha Kannada Daily Newspaper | ದೇಶದೂತ ಕನ್ನಡ ದಿನಪತ್ರಿಕೆ | ಕೊಪ್ಪಳ ಜಿಲ್ಲೆ ದಿನಪತ್ರಿಕೆ ಸುದ್ದಿ | Latest koppal News

ಇಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ, ನಾರಾಯಣಸ್ವಾಮಿ ಅವರಿಂದ ಸಾರ್ವಜನಿಕ ಸಭೆ

ಡಿ ಡಿ ನ್ಯೂಸ್. ಕೊಪ್ಪಳ

ಡಿ ಡಿ ನ್ಯೂಸ್. ಕೊಪ್ಪಳ

 ರಾಜ್ಯ ಚುನಾವಣೆ ಹಿನ್ನೆಲೆ ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಪರ ಮತ ಪ್ರಚಾರಕ್ಕೆ ಏ. 29 ರಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಜಿಲ್ಲೆಗೆ ಆಗಮಿಸುತ್ತಿದ್ದಾರೆ.
ಏ.29 ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 1.25 ಕ್ಕೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ ಗೆ ಬಂದು ಇಳಿಯಲಿದ್ದಾರೆ. 2.20ಕ್ಕೆ ಭಾಗ್ಯನಗರ ಪಟ್ಟಣ ಪಂಚಾಯತಿ ಕಚೇರಿ ಬಳಿಯ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಇನ್ನು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ಸಂಸದ ಕರಡಿ ಸಂಗಣ್ಣ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ, ಬಿಜೆಪಿ ಪದಾಧಿಕಾರಿಗಳು, ಮತದಾರರು ಸೇರಿ ಒಟ್ಟಾರೆ 20 ಸಾವಿರ ಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ.
Leave A Reply

Your email address will not be published.