Deshadootha Kannada Daily Newspaper | ದೇಶದೂತ ಕನ್ನಡ ದಿನಪತ್ರಿಕೆ | ಕೊಪ್ಪಳ ಜಿಲ್ಲೆ ದಿನಪತ್ರಿಕೆ ಸುದ್ದಿ | Latest koppal News

ಮತದಾನ ಜಾಗೃತಿ: ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನಸೆಳೆದ ಗ್ರಾಪಂ ಸಿಬ್ಬಂದಿ

ಡಿ ಡಿ ನ್ಯೂಸ್. ಕೊಪ್ಪಳ

ಡಿ ಡಿ ನ್ಯೂಸ್. ಗಂಗಾವತಿ

ಶ್ರೀರಾಮನಗರ ಗ್ರಾಮ ಪಂಚಾಯತ್ ಸ್ವೀಪ್ ಸಮಿತಿಯಿಂದ ಗುಂತಗಲ್ ಕ್ಯಾಂಪಿನಲ್ಲಿ ಏಪ್ರಿಲ್ 27ರಂದು ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.

ಮತದಾನ ಜಾಗೃತಿ ಜಾಥಾದಲ್ಲಿ ಗ್ರಾಪಂ ಅಧಿಕಾರಿಗಳು, ಸಿಬ್ಬಂದಿಯು ಸಾಂಪ್ರದಾಯಿಕ ಉಡುಗೆತೊಟ್ಟು ಎಲ್ಲರ ಗಮನ ಸೆಳೆದರು. ಮತದಾನ ಜಾಗೃತಿ ಗೀತೆಗಳಿಗೆ ಲಂಬಾಣಿ ಸಮುದಾಯದ ಮಹಿಳೆಯರು ನೃತ್ಯ ಮಾಡುವ ಮೂಲಕ ಜಾಗೃತಿ ಮೂಡಿಸಿದರು.


ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ವತ್ಸಲಾ ಅವರ ನೇತೃತ್ವದ ತಂಡವು ಗುಂತಗಲ್ ಕ್ಯಾಂಪಿನ ಪ್ರಮುಖ ಬೀದಿಗಳಲ್ಲಿ ಮತದಾನ ಜಾಗೃತಿ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಜಾಗೃತಿ ಮೂಡಿಸಿತು.

ಗ್ರಾಪಂ ಪಿಡಿಓ ಅವರು ಮಾತನಾಡಿ, ಮೇ 10 ರಂದು ನಡೆಯುವ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯ ಮತದಾನ ಮಾಡಬೇಕು. ಯಾವುದೇ ಆಸೆ, ಆಮೀಷಕ್ಕೆ ಒಳಗಾಗದೆ ಮತ ಹಕ್ಕು ಚಲಾಯಿಸಬೇಕು ಎಂದರು.

ಕಾರ್ಯಕ್ರಮಕ್ಕೂ ಮುನ್ನ ವಾರದ ಸಂತೆಯಲ್ಲಿ ಮತದಾನ ಜಾಗೃತಿ ಗೀತೆಗಳೊಂದಿಗೆ ಮತದಾನ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಪಂ ಕಾರ್ಯದರ್ಶಿ ಗಂಗಪ್ಪ, ತಾಲೂಕು ಐಇಸಿ ಸಂಯೋಜಕರು, ಗ್ರಾಪಂ ಎಸ್.ಡಿ.ಎ., ಎಲ್ಲ ಸಿಬ್ಬಂದಿ, ಎನ್.ಆರ್.ಎಲ್.ಎಂ ಯೋಜನೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.

Leave A Reply

Your email address will not be published.