ಮೈಕ್ರೋ ವೀಕ್ಷಕರ ನಿಯೋಜನೆಯ ರ‍್ಯಾಂಡಮೈಸೇಶನ್   

ಡಿ ಡಿ ನ್ಯೂಸ್. ಕೊಪ್ಪಳ

ಡಿ ಡಿ ನ್ಯೂಸ್. ಕೊಪ್ಪಳ

ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಹಿನ್ನಲೆಯಲ್ಲಿ ಜಿಲ್ಲಾಡಳಿತ ಭವನದ ಕೇಶ್ವಾನ್ ಸಭಾಂಗಣದಲ್ಲಿ ಮತಗಟ್ಟೆಗಳಿಗೆ ಮೈಕ್ರೋ ವೀಕ್ಷಕರ ನಿಯೋಜನೆಯ ರ‍್ಯಾಂಡಮೈಸೇಶನ್ ಪ್ರಕ್ರಿಯೆಯು ಏಪ್ರೀಲ್ 29ರಂದು ನಡೆಯಿತು.

ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯ ಅನ್ವಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಕೊಪ್ಪಳ ಜಿಲ್ಲೆಗೆ ನಿಯುಕ್ತಿಯಾದ ಚುನಾವಣಾ ಸಾಮಾನ್ಯ ವೀಕ್ಷಕರ ಸಮ್ಮುಖದಲ್ಲಿ ಈ ರ‍್ಯಾಂಡಮೈಜೇಶನ್ ಪ್ರಕ್ರಿಯೆಯನ್ನು ನಡೆಸಲಾಯಿತು. ಈ ಪ್ರಕ್ರಿಯೆಯಲ್ಲಿ ಜಿಲ್ಲೆಯ ಕುಷ್ಟಗಿ, ಕೊಪ್ಪಳ, ಕನಕಗಿರಿ, ಗಂಗಾವತಿ ಮತ್ತು ಯಲಬುರ್ಗಾ ವಿಧಾನಸಭಾ ಕ್ಷೇತ್ರಗಳಿಗೆ ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಯಿತು ಎಂದು ಇದೆ ವೇಳೆ ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುAದರೇಶಬಾಬು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಎನ್.ಐ.ಸಿ ಅಧಿಕಾರಿಗಳು ಹಾಗೂ ಇನ್ನೀತರರು ಉಪಸ್ಥಿತರಿದ್ದರು.
koppak
Comments (0)
Add Comment