ಕನಕಗಿರಿಯಲ್ಲಿ ಬೀದಿ ನಾಟಕ, ಸಹಿ ಸಂಗ್ರಹ ಅಭಿಯಾನ

ಡಿ ಡಿ ನ್ಯೂಸ್. ಕೊಪ್ಪಳ

ಡಿ ಡಿ ನ್ಯೂಸ್. ಕನಕಗಿರಿ

ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ ಸಹಯೋಗದಲ್ಲಿ ನಮ್ಮ ನಡೆ ಮತಗಟ್ಟೆಗಳ ಕಡೆ ವಿಶೇಷ ಕಾರ್ಯಕ್ರಮವು ಏಪ್ರೀಲ್ 30ರಂದು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಕಂದಕೂರ ಅವರು ಮಾತನಾಡಿ ಪ್ರತಿಜ್ಞಾವಿಧಿ ಬೋಧಿಸಿದರು.


ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲು ಪಟ್ಟಣದಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು. ಜಾಥಾದಲ್ಲಿ ಮತದಾನದ ಜಾಗೃತಿ ಫಲಕಗಳನ್ನು ಹಿಡಿದು, ಮತದಾನದ ಗೀತೆಗಳನ್ನು ಪ್ರಚುರಪಡಿಸಿ ಜಾಗೃತಿ ಮೂಡಿಸಲಾಯಿತು.

ರಂಗಚೇತನ ಸಾಂಸ್ಕೃತಿಕ ಕಲಾ ಸಂಸ್ಥೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಬೀದಿ ನಾಟಕ ಪ್ರದರ್ಶನ ಮಾಡಲಾಯಿತು.

ಮತದಾನಕ್ಕಿಂತ ಮತ್ತೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಧ್ಯೇಯ ವ್ಯಾಖ್ಯದಂತೆ ಮತದಾರರ ಸಹಿ ಸಂಗ್ರಹ ಅಭಿಯಾನಕ್ಕೆ ಅಹ ಚಾಲನೆ ನೀಡಲಾಯಿತು. ಪಟ್ಟಣ ಪಂಚಾಯತ್ ಆವರಣದಲ್ಲಿ ಸ್ವಸಹಾಯ ಸಂಘದ ಮಹಿಳೆಯರು, ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ಒಬ್ಬೊಬ್ಬರಾಗಿ ಖಚಿತವಾಗಿ ಮತದಾನ ಮಾಡುವೆ ಎಂದು ಸಂತಸದಿಂದ ತಮ್ಮ ಸಹಿ ಮಾಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಸ್ವಸಹಾಯ ಸಂಘದ ಮಹಿಳೆಯರು, ಬೀದಿ ನಾಟಕ ಕಲಾ ತಂಡದವರು, ಸಾರ್ವಜನಿಕರು, ಸಿಬ್ಬಂದಿ ಇದ್ದರು.

kanakagiri
Comments (0)
Add Comment