ಬಸರಿಹಾಳ, ಬೀಜಕಲ್ ಗ್ರಾಮಕ್ಕೆ ಪಂಚಾಯತ್ ರಾಜ್ಯ ಇಲಾಖೆಯ ಆಯುಕ್ತರ ಭೇಟಿ: ಪರಿಶೀಲನೆ

ಡಿ ಡಿ ನ್ಯೂಸ್. ಕೊಪ್ಪಳ

ಡಿ ಡಿ ನ್ಯೂಸ್.

ಕೊಪ್ಪಳ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಪ್ರೀಯಾಂಕ ಮೇರಿ ಫ್ರಾನ್ಸಿಸ್ ಅವರು ಜೂನ್ 14ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿದರು.

ಕನಕಗಿರಿ ತಾಲೂಕಿನ ಬಸರಿಹಾಳ, ಕುಷ್ಟಗಿ ತಾಲೂಕಿನ ಬೀಜಕಲ್ ಸೇರಿದಂತೆ ವಿವಿಧೆಡೆ ತೆರಳಿ ಶಂಕಿತ ವಾಂತಿ ಬೇಧಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು.

ಬಸರಿಹಾಳ ಗ್ರಾಮದಲ್ಲಿ ಮನೆಮನೆಗಳಿಗೆ ಸರಬರಾಜು ಆಗುವ ನೀರಿನ ಬೋರ್‌ವೆಲ್‌ಗಳನ್ನು ಪರಿಶೀಲಿಸಿದರು. ಗ್ರಾಮದಲ್ಲಿ ತೆರೆಯಲಾದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದರು. ಗ್ರಾಮದಲ್ಲಿನ ಪರಿಸರ, ಚರಂಡಿಗಳು, ಜೆಜೆಎಂನಡಿಯ ಕಾಮಗಾರಿಯ ವೀಕ್ಷಣೆ ಮಾಡಿದರು. ಇದೆ ವೇಳೆ ಗ್ರಾಮ ಪಂಚಾಯತಿಯಲ್ಲಿ ಸದಸ್ಯರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಗ್ರಾಮದ ಪ್ರಸ್ತುತ ಸ್ಥಿತಿ ಗತಿ ಕುರಿತು ಮಾಹಿತಿ ಪಡೆದರು.


ಬೀಜಕಲ್ ಗ್ರಾಮಕ್ಕೆ ಭೇಟಿ: ಕುಷ್ಟಗಿ ತಾಲೂಕಿನ ಬೀಜಕಲ್ ಗ್ರಾಮಕ್ಕೆ ಸಹ ಭೇಟಿ ನೀಡಿ ಅಲ್ಲಿನ ಆರೋಗ್ಯ ತಪಾಸಣಾ ಶಿಬಿರದಲ್ಲಿದ್ದ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ವರದಿ ಪಡೆದರು. ಬೀಜಕಲ್ ಗ್ರಾಮದ ಹೊರವಲಯದಲ್ಲಿನ ಪೈಪಲೈನಗಳನ್ನು ವೀಕ್ಷಿಸಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗ್ರಾಮದ ವಾತಾವರಣ ಪರಿಶೀಲಿಸಿದರು. ಬಳಿಕ ಮನೆಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿದರು. ಓ.ಹೆಚ್.ಟಿ ಟ್ಯಾಂಕ್ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಮಳಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪದ್ಮಾವತಿ ಜಿ., ತಾಲೂಕು ದಂಡಾಧಿಕಾರಿಗಳಾದ ರಾಘವೇಂದ್ರ ರಾವ್, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿವಪ್ಪ ಸುಬೇದಾರ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಆನಂದ್ ಗೋಟುರ್ ಸೇರಿದಂತೆ ಜಿಲ್ಲಾ ಆರ್.ಡಬ್ಲ್ಯೂ.ಎಸ್ ಇಲಾಖೆ ಇಇ ಮತ್ತು ಎಇಇ ಹಾಗೂ ಸಿಬ್ಬಂದಿ ವರ್ಗ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಪಿಡಿಓ, ತಾಲೂಕ ಪಂಚಾಯತ್ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿ ಅಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Comments (0)
Add Comment