ಕುದರಿಮೋತಿ: ವಸತಿ ಶಾಲೆಯ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ
ಡಿ ಡಿ ನ್ಯೂಸ್. ಕೊಪ್ಪಳ : ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗಾಗಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಈ ವಸತಿ ಶಾಲೆಯಲ್ಲಿ ಖಾಲಿ ಇರುವ ಇಂಗ್ಲೀಷ್ ಮತ್ತು ಸಮಾಜ ವಿಜ್ಞಾನ ವಿಷಯಗಳ ತಲಾ ಒಂದು ಹುದ್ದೆಗೆ ಬಿಎ ಬಿಎಡ್ ವಿದ್ಯಾರ್ಹತೆ, ಒಂದು ಗಣಕಯಂತ್ರ ಶಿಕ್ಷರ ಹುದ್ದೆಗೆ ಬಿಎಸ್ಸಿ ಇನ್-ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹಾಗೂ ಒಂದು ಆರ್ಟ್ & ಕ್ರಾಫ್ಟ್ ಶಿಕ್ಷಕರ ಹುದ್ದೆಗೆ ಡಿಪ್ಲೋಮಾ ಇನ್-ಆರ್ಟ್ & ಕ್ರಾಫ್ಟ್ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಜೂನ್ 26ರ ಸಂಜೆ 5ಗಂಟೆಯೊಳಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆ ಕುದರಿಮೋತಿ, ಶಾಲೆಯಲ್ಲಿ ಅಥವಾ ಹೊಸಪೇಟೆ ರಸ್ತೆ ಮೌಲಾನಾ ಆಜಾದ್ ಭವನದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ವಸತಿ ಶಾಲೆಯ ಪ್ರಾಶುಂಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments (0)
Add Comment