ಜೂನ್ 21ರಂದು ಗವಿಸಿದ್ದೇಶ್ವರ ಮೈದಾನದಲ್ಲಿ ಯೋಗಾ ದಿನಾಚರಣೆ

ಡಿ ಡಿ ನ್ಯೂಸ್. ಕೊಪ್ಪಳ
ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳದ ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸ್ವಸ್ಥವೃತ್ತ ವಿಭಾಗ ಹಾಗೂ ಎನ್.ಎಸ್.ಎಸ್ ಘಟಕ, ಪತಂಜಲಿ ಯೋಗ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ-2023 “ವಸುಧೈವ ಕುಟುಂಬಕಂ”ಗಾಗಿ ಯೋಗ ಕಾರ್ಯಕ್ರಮವನ್ನು ಬೆಳಿಗ್ಗೆ 6ಕ್ಕೆ ನಗರದ ಶ್ರೀ ಗವಿಸಿದ್ದೇಶ್ವರ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ದಿವ್ಯ ಸಾನಿದ್ಯ ವಹಿಸುವರು. ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬನ್ನಿಕಟ್ಟಿ ಹನುಮಂತಪ್ಪ ಆರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಶ್ರೀ ಜ.ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ಬಿ.ಎಸ್.ಸವಡಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ (ತ್ವರಿತಗತಿ ವಿಶೇಷ ಪೋಕ್ಸೋ ನ್ಯಾಯಾಲಯ-1) ಕುಮಾರ ಡಿ.ಕೆ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ಎಲ್.ಜೆ.ಭವಾನಿ, ಜೆ.ಎಂ.ಎಫ್.ಸಿ ನ್ಯಾಯಾಲಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಆದಿತ್ಯಾ ಕುಮಾರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ.ಕಣವಿ ಅವರು ಪಾಲ್ಗೊಳ್ಳುವರು.
ಅತಿಥಿಗಳಾಗಿ ಶ್ರೀ ಗ.ವಿ.ವ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ ಆರ್.ಮರೇಗೌಡ, ಸಂಸ್ಥೆಯ ಸದಸ್ಯರಾದ ಸಂಜಯ ಕೊತಬಾಳ, ಆಡಳಿತಾಧಿಕಾರಿಗಳಾದ ಎಸ್.ಎ.ಪಾಟೀಲ್, ಪಂತಂಜಲಿ ಯೋಗ ಸಮಿತಿಯ ರಾಜ್ಯ ಸಮಿತಿ ಸದಸ್ಯರಾದ ಡಾ ಎಸ್.ಬಿ.ಹಂದ್ರಾಳ, ಕೊಪ್ಪಳ ಪಂತಂಜಲಿ ಯೋಗ ಸಮಿತಿಯ ಜಿಲ್ಲಾ ಸಹ ಪ್ರಭಾರಿ ಭೀಮಸೇನ ಮೇಘರಾಜ, ತಾಲೂಕು ಪ್ರಭಾರಿ ಬಸವರಾಜ ಅಂಗಡಿ, ಖಜಾಂಚಿ ರಾಮಗೋಪಾಲ ತಪಾಡಿಯ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Comments (0)
Add Comment