ಕೃಷಿ ವಿಕಾಸ ಯೋಜನೆಯಡಿ ಕವ್ ಮ್ಯಾಟ್: ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ
ಡಿ ಡಿ ನ್ಯೂಸ್. ಕೊಪ್ಪಳ : ಕೊಪ್ಪಳ ಪಶುಪಾಲನಾ ಇಲಾಖೆ ವತಿಯಿಂದ 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕವ್ ಮ್ಯಾಟ್‌ಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕವ್ ಮ್ಯಾಟ್ (ರಬ್ಬರ್ ನೆಲಹಾಸು) ವಿತರಣೆ ಯೋಜನೆಯಡಿ ಆಯ್ಕೆಯಾದ ಪ್ರತಿ ಫಲಾನುಭವಿಗಳಿಗೆ ಎರಡು ಕವ್ ಮ್ಯಾಟ್‌ಗಳನ್ನು ವಿತರಣೆ ಮಾಡಲಾಗುವುದು. ಈ ಕಾರ್ಯಕ್ರಮದಡಿ ಘಟಕದ ವೆಚ್ಚ (ಎರಡು ಕವ್ ಮ್ಯಾಟ್‌ಗಳಿಗೆ) ರೂ. 5,598 ಇದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.50ರಂಷ್ಟು ಅಂದರೆ, ರೂ. 2,799 ಗಳ ಸಹಾಯಧನ ಮತ್ತು ಉಳಿದ ಶೇ 50 ಮೊತ್ತವು ಪಲಾನುಭವಿಗಳ ವಂತಿಕೆಯೊಂದಿಗೆ ಯೋಜನೆ ಅನುಷ್ಠಾನಗೋಳಿಸಲಾಗುವುದು.
ಅರ್ಜಿ ಸಲ್ಲಿಸಲು ಅರ್ಜಿದಾರರು ಫ್ರೂಟ್ಸ್ ಐಡಿ(ಗುರುತಿನ ಸಂಖ್ಯೆ) ಹೊಂದಿರಬೇಕು. ಕಡ್ಡಾಯವಾಗಿ ಕನಿಷ್ಠ 2 ಜಾನುವಾರುಗಳನ್ನು ಹೊಂದಿರುಬೇಕು. ಫಲಾನುಭವಿಗಳು ಆರ್.ಡಿ ಸಂಖ್ಯೆಯ ಜಾತಿ ಪ್ರಮಾಣ ಪತ್ರವನ್ನು ಹೊಂದಿರಬೇಕು. ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ ಹೊಂದಿರಬೇಕು. ಸರ್ಕಾರದ ನಿಯಮಗಳಂತೆ ಶೇ 33.3ರಷ್ಟು ಮಹಿಳೆಯರಿಗೆ, ಶೇ 15ರಷ್ಟು ಅಲ್ಪಸಂಖ್ಯಾತರಿಗೆ ಮತ್ತು ಶೇ 3ರಷ್ಟು ವಿಶೇಷ ಚೇತನರಿಗೆ ಆಧ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಜುಲೈ 07 ಕೊನೆಯ ದಿನವಾಗಿದ್ದು, ಅರ್ಜಿಗಳಿಗಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲೂಕುಗಳ ಸಹಾಯಕ ನಿರ್ದೇಶಕರು ಅಥವಾ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ), ಮುಖ್ಯ ಪಶುವೈದ್ಯಾದಿಕಾರಿಗಳು ಪಶು ಆಸ್ಪತ್ರೆ, ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ, ಕನಕಗಿರಿ, ಕಾರಟಗಿ, ಕುಕನೂರು ಕಚೇರಿಗಳಿಗೆ ಸಂಪರ್ಕಿಸಬಹುದು. ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಡಾ.ನಾಗರಾಜ ಹೆಚ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments (0)
Add Comment