Deshadootha Kannada Daily Newspaper | ದೇಶದೂತ ಕನ್ನಡ ದಿನಪತ್ರಿಕೆ | ಕೊಪ್ಪಳ ಜಿಲ್ಲೆ ದಿನಪತ್ರಿಕೆ ಸುದ್ದಿ | Latest koppal News

ಶ್ರೀ ಭಗೀರಥ ಜಯಂತಿ: ಪುಷ್ಪನಮನ ಸಲ್ಲಿಕೆ

ಡಿ ಡಿ ನ್ಯೂಸ್. ಕೊಪ್ಪಳ

 ಡಿ ಡಿ ನ್ಯೂಸ್. ಕೊಪ್ಪಳ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಜಿಲ್ಲಾ ಮಟ್ಟದ ಶ್ರೀ ಭಗೀರಥ ಜಯಂತಿ ಆಚರಿಸಲಾಯಿತು.
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಶ್ರೀ ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಎಲ್.ಬಿ.ನಾಲವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷರಾದ ಯಲ್ಲಪ್ಪ ಗದ್ದಿ, ಕಾರ್ಯದರ್ಶಿ ವೆಂಕಟೇಶ್ ಬ್ಯಾಡಗಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಮತ್ತಿತರರು ಇದ್ದರು.
Leave A Reply

Your email address will not be published.