Deshadootha Kannada Daily Newspaper | ದೇಶದೂತ ಕನ್ನಡ ದಿನಪತ್ರಿಕೆ | ಕೊಪ್ಪಳ ಜಿಲ್ಲೆ ದಿನಪತ್ರಿಕೆ ಸುದ್ದಿ | Latest koppal News

ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಿ

ಡಿ ಡಿ ನ್ಯೂಸ್. ಕೊಪ್ಪಳ

ಡಿ ಡಿ ನ್ಯೂಸ್. ಕೊಪ್ಪಳ :
ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿರುವ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಹಿರಿಯ ನಾಗರಿಕರ ಗುರುತಿನ ಚೀಟಿಗಳನ್ನು ವಿತರಿಸುತ್ತಿದ್ದು, ಈ ಸೌಲಭ್ಯವನ್ನು ಪಡೆಯಲು ಸೇವಾಸಿಂಧು ಆನ್‌ಲೈನ್ ಪೋರ್ಟ್ಲ್ https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು.
*ಹಿರಿಯ ನಾಗರಿಕರಿಗೆ ಸೌಲಭ್ಯಗಳು:*
ಹಿರಿಯ ನಾಗರಿಕರ ಗುರುತಿನ ಚೀಟಿಯಿಂದ ಶೇ.25ರಷ್ಟು ವಿಮಾನ ಟಿಕೇಟ್ ದರ ರಿಯಾಯಿತಿ, ಶೇ.25ರಷ್ಟು ರೈಲ್ವೇ ಟಿಕೇಟ್ ದರ ರಿಯಾಯಿತಿ, ಶೇ.25ರಷ್ಟು ಬಸ್‌ಪಾಸ್ ಮತ್ತು ಬಸ್ ಟಿಕೇಟ್ ದರ ರಿಯಾಯಿತಿ (ಬಿಎಂಟಿಸಿ & ಕೆ.ಎಸ್.ಆರ್.ಟಿ.ಸಿ), ಆದಾಯ ತೆರಿಗೆ ವಿನಾಯಿತಿ. ಹಿರಿಯ ನಾಗರಿಕರ ಪೋಷಣಾ ಭತ್ಯೆ, ಈ ಎಲ್ಲಾ ಸೌಲಭ್ಯಗಳು ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅಥವಾ ಕಚೇರಿ ದೂರವಾಣಿ ಸಂಖ್ಯೆ: 08539-200460ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸೇವಾ ಸಿಂಧು
SEVASINDHU.KARNATAKA.GOV.IN
ಸೇವಾ ಸಿಂಧು
ಡಿಜಿಲಾಕರ್ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (ಡಿಐಸಿ) ಅಡಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದ ಪ್ರಮುಖ ಪಾತ್ರ ವಹಿಸಿದೆ …
Leave A Reply

Your email address will not be published.