Deshadootha Kannada Daily Newspaper | ದೇಶದೂತ ಕನ್ನಡ ದಿನಪತ್ರಿಕೆ | ಕೊಪ್ಪಳ ಜಿಲ್ಲೆ ದಿನಪತ್ರಿಕೆ ಸುದ್ದಿ | Latest koppal News

ಎಸ್ಸಿಪಿ-ಟಿಎಸ್ಪಿ ಯೋಜನೆ, ಸಕಾಲ ಅರ್ಜಿಗಳ ಪ್ರಗತಿ ಪರಿಶೀಲನೆ

ಡಿ ಡಿ ನ್ಯೂಸ್. ಕೊಪ್ಪಳ

ಡಿ ಡಿ ನ್ಯೂಸ್. ಕೊಪ್ಪಳ :
 2023-24ನೇ ಸಾಲಿನ ಜೂನ್-2023 ಅಂತ್ಯದವರೆಗಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರ ಅಧ್ಯಕ್ಷತೆಯಲ್ಲಿ ಜುಲೈ 24ರಂದು ನಡೆಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಹಣಕಾಸು ವರ್ಷದಲ್ಲಿ ಸಹ ಎಸ್ಸಿಪಿ ಮತ್ತು ಟಿಎಸ್ಪಿ ಭೌತಿಕ ಮತ್ತು ಆರ್ಥಿಕ ಗುರಿ ಸಾಧನೆಗೆ ಒತ್ತು ಕೊಡಬೇಕು. ಕ್ರಿಯಾಯೋಜನೆಗೆ ಅನುಮೋದನೆಯಾದ ತಕ್ಷಣ ಮತ್ತು ಅನುದಾನ ಬಿಡುಗಡೆಯಾದ ಕೂಡಲೇ ಯೋಜನೆಗಳ ಅನುಷ್ಠಾನಕ್ಕೆ ಒತ್ತು ಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಕಾಲ ಅರ್ಜಿಗಳ ವಿಲೆಗೆ ಒತ್ತು ಕೊಡಿ: ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011ರ ಸಮರ್ಪಕ ಅನುಷ್ಠಾನ ಮತ್ತು ಐಪಿಜಿಆರ್‌ಎಸ್ ಅರ್ಜಿಗಳ ವಿಲೇಗೆ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಐಪಿಜಿಆರ್‌ಎಸ್ ಹಾಗೂ ಸಕಾಲ ಯೋಜನೆಯಡಿ ಸ್ವೀಕೃತವಾದ ಅರ್ಜಿಗಳಿಗೆ ಸಕಾಲದಲ್ಲಿ ಸೇವೆ ಸಿಗುವಂತಾಗಬೇಕು. ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಸಕಾಲ ಅರ್ಜಿಗಳು ಕಾಲಮಿತಿಯೊಳಗೆ ವಿಲೆಯಾಗಲು ಒತ್ತು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಮಾತನಾಡಿದರು.
ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಪಂ ಮುಖ್ಯ ಯೋಜನಾಧಿಕಾರಿಗಳಾದ ಡಿ.ಮಂಜುನಾಥ್, ಕೃಷಿ, ತೋಟಗಾರಿಕೆ, ರೇಷ್ಮೆ, ಆರೋಗ್ಯ ಇಲಾಖೆ, ಕೈಗಾರಿಕೆ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Leave A Reply

Your email address will not be published.